ಉಜಿರೆ: ಮಂಗಳೂರು ವಿಶ್ವವಿದ್ಯಾನಿಲಯ, ನೆಹರು ಚಿಂತನ ಕೇಂದ್ರ ಮತ್ತು ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯ ದವರು ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿಯಲ್ಲಿ ಆಯೋಜಿಸಿದ್ದ “ಭಾರತದ ಸ್ವಾತಂತ್ರ್ಯ ಹೋರಾಟ: ಗಾಂಧೀಜಿಯವರ ಕೊಡುಗೆಗಳು ಮತ್ತು ಜೀವನ ಮೌಲ್ಯ” ಎಂಬ ವಿಷಯದ ಕುರಿತು ನಡೆಸಿದ ಅಂತರ್ ಕಾಲೇಜು ರಸಪ್ರಶ್ನೆ ಸ್ಪರ್ಧೆಯಲ್ಲಿ ಎಸ್.ಡಿ.ಎಂ ಬಿ.ಎಡ್. ಕಾಲೇಜಿನ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಾದ ಮಲ್ಲಿಕಾರ್ಜುನ ಎಸ್ ಪಾಟೀಲ್, ದರ್ಶನ್ ಪಿ, ನಾಗವೇಣಿ ಜಿ ಎಸ್ ಇವರು ಪ್ರಥಮ ಬಹುಮಾನ ರೂ. 10000 ನಗದು, ಫಲಕ ಮತ್ತು ಪ್ರಮಾಣಪತ್ರವನ್ನು ಪಡೆದಿರುತ್ತಾರೆ.
ಇವರನ್ನು ಸಂಸ್ಥೆಯ ಕಾರ್ಯದರ್ಶಿಯವರು, ಆಡಳಿತ ಮಂಡಳಿಯವರು, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿರುತ್ತಾರೆ.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಸ್ವಾತಂತ್ರ್ಯ ಸಂಗ್ರಾಮದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರವು ಗಾಂಧೀಜಿಯವರ ಜೀವನ ಮೌಲ್ಯಗಳು ಮತ್ತು ತ್ಯಾಗ ಬಲಿದಾನದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ವಿವಿಧ ಸ್ಪರ್ಧೆಗಳನ್ನು ನಡೆಸಲು ನಿರ್ದೇಶಿಸಿತ್ತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ