ಚುನಾವಣಾ ಪೂರ್ವದಲ್ಲಿ ನೀಡಿದ್ದ ಗ್ಯಾರಂಟಿಗಳ ಈಡೇರಿಸಿದ್ದೇವೆ: ರಾಹುಲ್‌ಗಾಂಧಿ

Upayuktha
0


ಹೊಸಪೇಟೆ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ 2 ವರ್ಷ ಪೂರೈಸಿದ್ದು, ಚುನಾವಣಾ ಪೂರ್ವದಲ್ಲಿ ನಾವು ಕೊಟ್ಟ ಗ್ಯಾರಂಟಿ ಯೋಜನೆಗೆ ಜಾರಿಗೊಳಿಸುವ ಆಶ್ವಾಸನೆಯನ್ನು ಈಡೇರಿಸಿದ್ದೇವೆ ಎಂದು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಂತಸ ವ್ಯಕ್ತಪಡಿಸಿದರು. 

ವಿಜಯನಗರ ಜಿಲ್ಲೆಯ  ಹೊಸಪೇಟೆಯಲ್ಲಿ ನಡೆದ ರೋಜ್ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ರಾಹುಲ್ ಗಾಂಧಿ, ಚುನಾವಣಾ ಪೂರ್ವದಲ್ಲಿ ನೀಡಿದ್ದ ಆಶ್ವಾಸನೆ ಈಡೇರಿಸಿದ್ದೇವೆ. ಗ್ಯಾರಂಟಿ ತರಲು ಆಗಲ್ಲ ಎಂದು ಪ್ರಧಾನಿ ಟೀಕಿಸಿದ್ದರು. ಬಿಜೆಪಿ ಟೀಕಿಸಿತ್ತು. ಆದರೆ ಕೊಟ್ಟ ಎಲ್ಲಾ ಭರವಸೆಯನ್ನು ನಾವು ಈಡೇರಿಸಿದ್ದೇವೆ ಎಂದರು.

1 ಕೋಟಿಗೂ ಹೆಚ್ಚು ಮಹಿಳೆಯರಿಗೆ 2 ಸಾವಿರ ಕೊಡುತ್ತಿದ್ದೇವೆ. ಎಲ್ಲಾ ಮನೆಗಳಿಗೂ ಉಚಿತ ವಿದ್ಯುತ್ ಕೊಡುತ್ತಿದ್ದೇವೆ. ಬಡ ಕುಟುಂಬಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗುತ್ತಿದೆ. ಕರ್ನಾಟಕದ ಮಹಿಳೆಯರು ಫ್ರಿಯಾಗಿ ಬಸ್‌ಗಳಲ್ಲಿ ಓಡಾಡುತ್ತಿದ್ದಾರೆ. ನಾವು ನೀಡಿದ್ದ 5 ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದೇವೆ ಎಂದರು.

ಬಿಜೆಪಿಯವರು ಎರಡರಿಂದ ಮೂರು ಕೋಟಾದಿಪತಿಗಳ ಪರ ನಿಂತಿದ್ದಾರೆ. ನಿಮ್ಮ ತೆರಿಗೆ ಹಣ ನಿಮ್ಮ ಸೌಕರ್ಯಕ್ಕೆ ಬಳಕೆಯಾಗಬೇಕು ಅನ್ನೋದು ನಮ್ಮ ಉದ್ದೇಶ ಹಣ ಬಡವರ ಕಷ್ಟಗಳಿಗೆ ಅಗಬೇಕು ಅನ್ನುವುದು ನಮ್ಮ ಉದ್ದೇಶ. ಆದರೆ ಕೆಲ ಉದ್ಯಮಿಗಳಿಗೆ ಕೊಡುವುದು ಬಿಜೆಪಿಯವರ ಉದ್ದೇಶ. ಕೋಟ್ಯಾಧಿಪತಿಗಳು ಹೊರ ದೇಶಗಳಲ್ಲಿ ಆಸ್ತಿ ಖರೀದಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ಬಡವರ ಪರ, ಬಿಜೆಪಿ ಯಾವತ್ತೂ ಶ್ರೀಮಂತರ ಪರ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.

ವೇದಿಕೆಯಲ್ಲಿ ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ಎಐಸಿಸಿ ಅಧ್ಯಕ್ಷರು ಆದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಕೃಷ್ಣಭೈರೇಗೌಡ, ಜಮೀರ್ ಅಹ್ಮದ್ ಖಾನ್, ಸೇರಿದಂತೆ ಎಲ್ಲಾ ಸಚಿವರು, ಸಂಸದರು, ಮಾಜಿ ಸಂಸದರು, ಎಲ್ಲಾ ಶಾಸಕರು, ಪಕ್ಷದ ಹಿರಿಯ ಧುರೀಣರು, ಮುಖಂಡರು ಭಾಗವಹಿಸಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter



Post a Comment

0 Comments
Post a Comment (0)
To Top