ಪಾಕಿಸ್ತಾನಕ್ಕೆ ಕಳಿಸಿಕೊಡ್ತೇವೆ, ನಮ್ಮ ಯೋಧರ ಪರಾಕ್ರಮ ನೋಡಿಕೊಂಡು ಬನ್ನಿ

Upayuktha
0

ಆಪರೇಶನ್ ಸಿಂದೂರ ಪ್ರಶ್ನಿಸಿದ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಗೆ ಕೇಂದ್ರ ಸಚಿವ ಎಚ್‌ಡಿಕೆ ಸವಾಲು




ಬೆಂಗಳೂರು: ಆಪರೇಷನ್ ಸಿಂದೂರ್ ಬಗ್ಗೆ ಕೋಲಾರದ ಶಾಸಕ ಕೊತ್ತೂರು ಮಂಜುನಾಥ್ ನೀಡಿರುವ ಹೇಳಿಕೆ ಕಾಂಗ್ರೆಸ್ ಪಕ್ಷದ ಅಂತರಾತ್ಮದ ದನಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.


ಈ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಅಪರೇಷನ್ ಸಿಂದೂರ ಕಾರ್ಯಾಚರಣೆ ನಂತರ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆ, ರಾಹುಲ್ ಗಾಂಧಿ ಸೇರಿ ಕರ್ನಾಟಕದ ಸೋಕಾಲ್ಡ್ ಕಾಂಗ್ರೆಸ್ ನಾಯಕರು ಕೂಡ ಇದೇ ರೀತಿಯಲ್ಲಿ ಹೇಳಿಕೆ ನೀಡಿದ್ದರು ಎಂದು ಕಿಡಿಕಾರಿದರು. ಪಹಲ್ಗಾಮ್'ನಲ್ಲಿ ಭಾರತೀಯ ಪ್ರವಾಸಿಗರ ಮೇಲೆ ಪೈಶಾಚಿಕ ಭಯೋತ್ಪಾದಕ ದಾಳಿ ಮತ್ತು ಉಗ್ರರಿಗೆ ಪಾಕಿಸ್ತಾನದ ಚಿತಾವಣೆಯಷ್ಟೇ ಅಲ್ಲದೇ ತನ್ನ ತನು-ಮನ-ಧನ ಅರ್ಪಣೆ ಮಾಡುತ್ತಿರುವುದನ್ನು ಖಂಡಿಸುವ ಬದಲಿಗೆ ಕಾಂಗ್ರೆಸ್ ಪಕ್ಷವು ಸೇನಾಪಡೆಗಳನ್ನು, ಪ್ರಧಾನಿ ನರೇಂದ್ರ ಮೋದಿ ಅವರನ್ನೂ ನಿಂದಿಸುತ್ತಿರುವುದು ನಾಚಿಕೆಗೇಡು ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.


ಕಾಂಗ್ರೆಸ್, ಭಾರತದ ರಾಜಕೀಯ ಪಕ್ಷವೋ? ಅಥವಾ ಶತ್ರು ದೇಶದ ವಕ್ತಾರಿಕೆ ಮಾಡುತ್ತಿರುವ ಪಕ್ಷವೋ? ಆದರ ತನ್ನ ಡಿಎನ್ಎ ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ ಎಂಬುದನ್ನು ಅದುವೇ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿರುವ ಕುಮಾರಸ್ವಾಮಿ, ಪಾಕಿಸ್ತಾನ ಸೃಷ್ಟಿಯಾಗಿದ್ದು ಹೇಗೆ? ಅದರಲ್ಲಿ ಕಾಂಗ್ರೆಸ್ ಪಾತ್ರವೇನು? ಎಂಬ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ. ಆದರೆ, ದೇಶ ವಿಭಜನೆಯಾಗಿ ಏಳೂವರೆ ದಶಕ ಕಳೆದರೂ ಆ ಪಕ್ಷ ಇನ್ನೂ ಪಾಕಿಸ್ತಾನ ಮನಃಸ್ಥಿತಿಯಲ್ಲೇ ಇದೆ! ಅಸ್ತಿತ್ವ ಭಾರತದಲ್ಲಿ, ಅದರ ಹೃದಯ ಮಾತ್ರ ಪಾಕಿಸ್ತಾನದಲ್ಲಿ!! ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ! ಎಂದು ಕಟುವಾಗಿ ಟೀಕಿಸಿದರು.


ಕೋಲಾರದ ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಪಕ್ಷದ ಅಂತರಾತ್ಮದ ದನಿ. ಆಚಾರವಿಲ್ಲದ ನಾಲಿಗೆ.  ಕೊತ್ತೂರು ನೀಡಿರುವ ಹೇಳಿಕೆ ಕಾಂಗ್ರೆಸ್ ಪಕ್ಷದ ಅಂತರಾತ್ಮದ ದನಿ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಸವಾಲು ಹಾಕಿದ್ದಾರೆ. ಹಾಗೆಯೇ, ಪ್ರಧಾನಿ ನರೇಂದ್ರ ಮೋದಿ ಅವರು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ವಿದೇಶಾಂಗ ಮಂತ್ರಿ ಎಸ್. ಜೈಶಂಕರ್ ಅವರ ಹೇಳಿಕೆಗಳನ್ನೂ ದೇಶ ಗಮನಿಸಿದೆ. ರಾಷ್ಟ್ರದ ಬಗ್ಗೆ ಅವರಿಗಿರುವ ಬದ್ಧತೆ, ಆಚಲತೆಯನ್ನು ನೋಡಿದೆ. ಕೊಂಡಾಡಿದೆ. ರಾಷ್ಟ್ರದ್ರೋಹ ಮತ್ತು ರಾಷ್ಟ್ರಪ್ರೇಮಕ್ಕೆ ಇರುವ ವ್ಯತ್ಯಾಸವಿದು ಎಂದು ಸಚಿವರು ಕಾಂಗ್ರೆಸ್ ಪಕ್ಷವನ್ನು ಕುಟುಕಿದರು.


ಆಪರೇಶನ್ ಸಿಂದೂರ್ ಬೂಟಾಟಿಕೆಯಂತೆ! ಇಡೀ ರಾಷ್ಟ್ರದ ಹೆಮ್ಮೆಯಾಗಿರುವ ಈ ಯಶಸ್ವಿ ಕಾರ್ಯಾಚರಣೆ ವಿರಾಟ್ ಸ್ವರೂಪವನ್ನು ಖುದ್ದು ನೋಡಬೇಕೆ ಮಂಜುನಾಥ್..? ಹಾಗಿದ್ದರೆ ಬನ್ನಿ. ನಿಮ್ಮನ್ನು ಪಾಕಿಸ್ತಾನಕ್ಕೆ ಕಳಿಸಿ ಕೊಡುತ್ತೇವೆ. ಭಾರತೀಯ ಸೇನೆಯ ಪರಾಕ್ರಮವನ್ನು ಖುದ್ದು ನೋಡಿಕೊಂಡು ಬರುವಿರಂತೆ. ಹೋಗುವಿರಾ ಪಾಕಿಸ್ತಾನಕ್ಕೆ..?


ಚುನಾವಣೆ ಆಯೋಗಕ್ಕೆ ನಕಲಿ ಜಾತಿ ಪ್ರಮಾಣ ಪತ್ರ ಕೊಟ್ಟು ಜನತೆಗೆ ಟೋಪಿ ಹಾಕಿ ಚುನಾವಣೆ ಗೆದ್ದಿದ್ದ ಈ ಕಿಡಿ ಗೇಡಿ ಕಾಂಗ್ರೇಸ್ ಶಾಸಕ, ತನ್ನೊಳಗಿದ್ದ ವಿಷವನ್ನೇ ಕಕ್ಕಿಕೊಂಡಿದ್ದಾರೆ. ಅಂಥ ವಿಷಕಾರಿ DNA ಉಳ್ಳ ಕಾಂಗ್ರೇಸ್ ಪಕ್ಷಕ್ಕೆ ರಾಷ್ಟ್ರಪ್ರೇಮವಿರಲು ಸಾಧ್ಯವೇ..? ಆಪರೇಷನ್ ಸಿಂಧೂರ್ ನಂತರ ಸೀನಿಯರ್ ಖರ್ಗೆ, ಜ್ಯೂನಿಯರ್ ಖರ್ಗೆ, ರಾಹುಲ್ ಗಾಂಧಿ ಸೇರಿ ಕರ್ನಾಟಕದ ಸೋ ಕಾಲ್ಡ್ ಕಾಂಗ್ರೇಸ್ ನಾಯಕರ ಆಣಿಮುತ್ತುಗಳನ್ನು ಗಮನಿಸಿದರೆ ಅವರ ಪ್ರೇಮ ಯಾವ ರಾಷ್ಟ್ರದ ಮೇಲೆ ಎಂದು ತಿಳಿಯುತ್ತದೆ! ಎಂದು ಕಾಂಗ್ರೇಸ್ ಪಕ್ಷಕ್ಕೆ ಸಚಿವರು ತಿರುಗೇಟು ನೀಡಿದರು.


ರಾಷ್ಟ್ರನಿಂದನೆ, ಸೇನೆಯ ನಿಂದನೆ ಕಾಂಗ್ರೆಸ್ ಪಕ್ಷಕ್ಕೆ ಹೊಸದಲ್ಲ. ಅದು ಕಾಂಗ್ರೆಸ್ ಪಕ್ಷಕ್ಕೆ ಜನ್ಮತಃ ಅಂಟಿರುವ ಜಾಡ್ಯ. ಪಾಕಿಸ್ತಾನ್ ನ್ಯಾಷನಲ್ ಕಾಂಗ್ರೆಸ್ ಪಾರ್ಟಿಯಾಗಿ ರೂಪಾಂತರಗೊಂಡಿರುವ ಆ ಪಕ್ಷದ ಅಸಲಿ ಅಜೆಂಡಾ ಏನು? ಹಿಡನ್ ಏನೆಲ್ಲಾ ಮಾಡುತ್ತಿದೆ? ಇದು ನನ್ನ ಮೂಲಭೂತ ಪ್ರಶ್ನೆ ಎಂದು ಸಚಿವರು ಹೇಳಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top