ಮಾನವೀಯ ಸೇವೆಯಿಂದ ಬದುಕಿಗೆ ಸಾರ್ಥಕತೆ: ಸತ್ಯನಾರಾಯಣ ನಾಯ್ಕ್

Upayuktha
0


ಮಂಗಳೂರು: ಯುವ ರೆಡ್‌ಕ್ರಾಸ್ ಮಂಗಳೂರು ವಿ.ವಿ. ಘಟಕದ ವತಿಯಿಂದ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದ.ಕ. ಮತ್ತು ಉಡುಪಿ ಜಿಲ್ಲಾ ಘಟಕದ ಸಹಯೋಗದಲ್ಲಿ ಮಂಗಳೂರು ವಿ.ವಿ. ಮಟ್ಟದ ಯುವ ರೆಡ್‌ಕ್ರಾಸ್ ಸದಸ್ಯರಿಗೆ ಆಯೋಜಿಸಿದ ಮೂರು ದಿನಗಳ ಪ್ರೇರಣಾ ಶಿಬಿರದ ಸಮಾರೋಪ ಸಮಾರಂಭ ಪಿಲಿಕುಳದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಭಾನುವಾರ ನಡೆಯಿತು.


ಮುಖ್ಯ ಅತಿಥಿಯಾಗಿದ್ದ ಬ್ಯಾಂಕ್ ಆಫ್ ಬರೋಡಾದ ನಿವೃತ್ತ ಡಿಜಿಎಂ ಸತ್ಯನಾರಾಯಣ ನಾಯ್ಕ್ ಮಾತನಾಡಿ, "ಮಾನವೀಯ ಸೇವೆಯಿಂದ ಬದುಕಿನಲ್ಲಿ ಸಾರ್ಥಕತೆ ಪಡೆಯಬಹುದು. ವಿದ್ಯಾರ್ಥಿಗಳು ಅಂತಹ ಉದಾತ್ತ ಮೌಲ್ಯಗಳನ್ನು ಅಳವಡಿಸಿಕೊಂಡು ನಾಡಿನ ಸತ್ಪ್ರಜೆಗಳಾಗಬೇಕು" ಎಂದರು.



ರೆಡ್‌ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ನವೀನ್ ಕಿಲ್ಲೆ, ಕಣಚೂರು ಮೆಡಿಕಲ್ ಕಾಲೇಜ್ ಆಸ್ಪತ್ರೆಯ ವೈದ್ಯಕೀಯ ಆಡಳಿತಾಧಿಕಾರಿ ಡಾ.ರೋಶನ್ ಮೋನಿಸ್ ಮುಖ್ಯ ಅತಿಥಿಗಳಾಗಿದ್ದರು.


ರೆಡ್‌ಕ್ರಾಸ್ ಸಂಸ್ಥೆಯ ದ.ಕ. ಜಿಲ್ಲಾ ಘಟಕದ ಖಜಾಂಜಿ ಮೋಹನ್ ಶೆಟ್ಟಿ, ನಿರ್ದೇಶಕ ಪಿ.ಬಿ.ಹರೀಶ್ ರೈ, ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ, ಯುವ ರೆಡ್‌ಕ್ರಾಸ್ ಸಂಯೋಜನಾಧಿಕಾರಿಗಳಾದ ನಟೇಶ್ ಆಳ್ವ, ಸಂತೋಷ್ ಪಿಂಟೊ, ದೀಕ್ಷಿತಾ, ಶಿಬಿರದ ಸಂಯೋಜಕ ಗಿರೀಶ್ ಕುಮಾರ್ ಉಪಸ್ಥಿತರಿದ್ದರು. ಶಿಬಿರದ ಅಂಗವಾಗಿ ಏರ್ಪಡಿಸಿದ ಸ್ಪರ್ಧೆಗಳ ವಿಜೇತರಿಗೆ ಹಾಗೂ ಉತ್ತಮ ತಂಡಗಳಿಗೆ ಪ್ರಶಸ್ತಿ ವಿತರಿಸಲಾಯಿತು.


ಯುವ ರೆಡ್‌ಕ್ರಾಸ್ ಸಂಯೋಜನಾಧಿಕಾರಿ ಯೋಗೀಶ್ ಶ್ಯಾನ್ ಭೋಗ್, ಮಂಗಳೂರು ವಿ.ವಿ. ಘಟಕದ ನೋಡಲ್ ಆಫೀಸರ್ ಡಾ. ಗಾಯತ್ರಿ.ಎನ್. ವಂದಿಸಿದರು. ಡಾ.ಅನುರಾಧಾ ಕುರುಂಜಿ ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top