ರಾಜ್ಯದ ಕರಾವಳಿಗಳಲ್ಲಿ ಕಟ್ಟೆಚ್ಚರ , ವಿದೇಶಿ ಹಡಗುಗಳ ತೀವ್ರ ತಪಾಸಣೆ

Upayuktha
0

ಮಂಗಳೂರು: ಭಾರತ ಉಗ್ರರ ತಾಣಗಳ ಮೇಲೆ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸಿದ  ಬಳಿಕ ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಪ್ರಮುಖ ನಗರಗಳು, ಬಂದರು, ವಿಮಾನ ನಿಲ್ದಾಣಗಳಿಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ರಾಜ್ಯದ ಕರಾವಳಿಗಳಲ್ಲೂ  ಹೈಅಲರ್ಟ್ ಘೋಷಿಸಲಾಗಿದೆ. ಕಾರವಾರದಲ್ಲಿ ನೌಕಾ ನೆಲೆ ಹಾಗೂ ಬಂದರಿನಲ್ಲಿ ಭದ್ರತೆ ಮತ್ತಷ್ಟು ಬಿಗಿಗೊಳಿಸಲಾಗಿದೆ. ಕರಾವಳಿ ಕಾವಲುಪಡೆ, ಭಾರತೀಯ ತಟರಕ್ಷಕ ದಳದಿಂದ ತಪಾಸಣೆ ಹೆಚ್ಚಿಸಲಾಗಿದೆ. 

ಕಾರವಾರದ ಬಂದರಿಗೆ ಆಮಿಸುವ ವಿದೇಶಗಳ ಹಡುಗುಗಳಲ್ಲಿ ಚೀನಾ, ಪಾಕಿಸ್ತಾನದ ಸಿಬ್ಬಂದಿಯಿದ್ದರೆ ಆ ಹಡಗುಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. 

ಬಂದರಿಗೆ ಬಂದ ಹಡಗುಗಳು ಹಾಗೂ ಮೀನುಗಾರಿಕಾ ಬೋಟ್‌ಗಳ ತಪಾಸಣೆ ನಡೆಸಲಾಗುತ್ತಿದೆ. 12 ನಾಟಿಕನ್ ಮೈಲೂ ದೂರದಿಂದ ಹೊರ ಹೋಗದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದ್ದು, ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.

ಅರಬ್ಬಿ ಸಮುದ್ರದಲ್ಲಿ ತೀವ್ರ ನಿಗಾ ವಹಿಸಿರುವ ಕರಾವಳಿ ಕಾವಲು ಪಡೆ ಪೊಲೀಸರು ಮಂಗಳೂರಿನ ಬಂದರು ಕಡಲ ತೀರದಲ್ಲಿ ಪರಿಶೀಲನೆ ನಡೆಸಿದ್ದಾರೆ. ಕರಾವಳಿ ಕಾವಲು ಪಡೆ ಅಧಿಕಾರಿಗಳು ಸಮುದ್ರ ಮಾರ್ಗದ ಮೀನುಗಾರಿಕಾ ಬೋಟ್‌ಗಳ ತಪಾಸಣೆ ನಡೆಸಿ ಮೀನುಗಾರರ ದಾಖಲೆ ಪರಿಶೀಲಿಸಿ ಅನುಮಾನಾಸ್ಪದ ಬೋಟ್‌ಗಳ ಮೇಲೆ ನಿಗಾ ಮುಂದುವರಿಸಿದ್ದಾರೆ

ಉಡುಪಿಯಲ್ಲೂ ಹೈಅಲರ್ಟ್ ಘೋಷಣೆಯಾಗಿದ್ದು, ಕರಾವಳಿ ಕಾವಲು ಪೊಲೀಸರು 22 ಕಿ.ಮೀ ಆಳ ಸಮುದ್ರದಲ್ಲಿ 320 ಕಿಮೀವರೆಗೆ ಕಾವಲು ಕಾಯುತ್ತಿದ್ದಾರೆ. ಪ್ರವಾಸಿ ತಾಣಗಳ ಮೇಲೂ ನಿಗಾ ಇಡಲಾಗಿದೆ. ಮಲ್ಪೆ ಕಡಲತೀರ, ಮರವಂತೆ, ಪಡುಬಿದ್ರೆ -ಕಾಪು ಪ್ರದೇಶಗಳಲ್ಲಿ ಸಿಎಸ್‌ಪಿ ಪಡೆ ಕಣ್ಗಾವಲು ಇಟ್ಟಿದೆ. 

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top