ಆದಂಪುರ ವಾಯುಸೇನಾ ನೆಲೆಗೆ ಭೇಟಿ ನೀಡಿ ಯೋಧರ ಶ್ಲಾಘಿಸಿದ ಪ್ರಧಾನಿ ಮೋದಿ

Upayuktha
0

ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಭಾರತೀಯ ವಾಯುಸೇನೆಯ ಪ್ರಮುಖ ಕೇಂದ್ರವಾಗಿರುವ ಪಂಜಾಬ್‌ನ ಆದಂಪುರ ವಾಯುಸೇನಾ ನೆಲೆಗೆ ಭೇಟಿ ನೀಡಿ ಯೋಧರೊಂದಿಗೆ ಸಂವಾದ ನಡೆಸಿದರು. ಆದಂಪುರ ವಾಯುನೆಲೆಯು ಉತ್ತರ ಭಾರತದ ಭದ್ರತೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಈ ಭೇಟಿಯ ಮೂಲಕ ಪ್ರಧಾನಿ ಮೋದಿ ಸಶಸ್ತ್ರ ಪಡೆಗಳ ಧೈರ್ಯವನ್ನು ಗೌರವಿಸಿ, ರಾಷ್ಟ್ರದ ಭದ್ರತೆಗಾಗಿ ಅವರ ಕೊಡುಗೆಯನ್ನು ಕೊಂಡಾಡಿದರು. 

ಪ್ರಧಾನಿಯವರನ್ನು ವಾಯುಸೇನೆಯ ಉನ್ನತ ಅಧಿಕಾರಿಗಳು ಸ್ವಾಗತಿಸಿದ ಬಳಿಕ ಆಪರೇಷನ್ ಸಿಂಧೂರ್‌ನ ಬಗ್ಗೆ  ಮೋದಿ ಸಮಗ್ರ ಮಾಹಿತಿಯನ್ನು ಪಡೆದರು. ರಾಷ್ಟ್ರ ರಕ್ಷಣೆಯಲ್ಲಿ ಆಪರೇಷನ್ ಸಿಂಧೂರ್ ಪಾತ್ರ ಮಹತ್ವದ್ದಾಗಿದೆ ಎಂದ ಪ್ರಧಾನಿ, ಕಾರ್ಯ ನಿರ್ವಹಿಸಿದ ಯೋಧರ ಶೌರ್ಯ ಮತ್ತು ತಂತ್ರಗಾರಿಕೆಯನ್ನು ಹೊಗಳಿದರು. ವಾಯುನೆಲೆಯ ತಾಂತ್ರಿಕ ಸೌಲಭ್ಯಗಳು ಮತ್ತು ಯುದ್ಧ ತಯಾರಿಯ ಬಗ್ಗೆ ಕೂಡ ಚರ್ಚೆ  ನಡೆಸಿದರು. 

ಈ ಭೇಟಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ ಮೋದಿ, ನಾನು ಆದಂಪುರ ವಾಯುಸೇನಾ ನೆಲೆಗೆ ಭೇಟಿ ನೀಡಿ, ನಮ್ಮ ಕೆಚ್ಚೆದೆಯ ಯೋಧರನ್ನು ಭೇಟಿಯಾದೆ. ಧೈರ್ಯ, ದೃಢನಿಶ್ಚಯ ಮತ್ತು ನಿರ್ಭೀತಯೋಧರೊಂದಿಗೆ ನಾನು ಇದ್ದಿದ್ದು ಬಹಳ ವಿಶೇಷ ಅನುಭವವಾಗಿತ್ತು. ನಮ್ಮ ಸಶಸ್ತ್ರ ಪಡೆಗಳು ರಾಷ್ಟ್ರಕ್ಕಾಗಿ ಮಾಡುವ ಎಲ್ಲದಕ್ಕೂ ಭಾರತವು ಶಾಶ್ವತವಾಗಿ ಕೃತಜ್ಞವಾಗಿದೆ ಎಂದು ಬರೆದುಕೊಂಡಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top