ಮಂಗಳೂರು: ಗಂಭೀರ ಸಮಸ್ಯೆ ಹಾಗೂ ತುರ್ತು ಸಂದರ್ಭಗಳಲ್ಲಿ ಇಲಾಖೆಗೆ ತ್ವರಿತ ಮಾಹಿತಿ ಹಾಗೂ ದೂರು ನೀಡಲು 2 ಹೊಸ ತುರ್ತು ದೂರವಾಣಿಗಳನ್ನು ವ್ಯವಸ್ಥೆಗೊಳಿಸಲಾಗಿದ್ದು, ಸಾರ್ವಜನಿಕರು ಈ ಸೇವೆಯನ್ನು ಬಳಸಿಕೊಳ್ಳಬಹುದಾಗಿದೆ ಎಂದು ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
ದೂರವಾಣಿ ಸಂಖ್ಯೆಗಳು: 8277883388 | 0824-2950953
ಸಾರ್ವಜನಿಕರು ಈ ದೂರವಾಣಿ ಸಂಖ್ಯೆಗಳನ್ನು ಗಂಭೀರ ಮತ್ತು ತುರ್ತು ಸಂದರ್ಭಗಳಲ್ಲಿ ಮಾತ್ರ ಬಳಸಬೇಕೆಂದು ವಿನಂತಿಸಲಾಗಿದೆ. ಇನ್ನಿತರ ಮೆಸ್ಕಾಂ ಸೇವೆಗಳಿಗಾಗಿ ಇಲಾಖೆಯ ಉಚಿತ ಸಹಾಯವಾಣಿ 1912 ಹಾಗೂ ಇಲಾಖೆ ಈಗಾಗಲೇ ವ್ಯವಸ್ಥೆಗೊಳಿಸಿರುವ ಸ್ಥಳೀಯ ಕಛೇರಿಯ ದೂರವಾಣಿಗಳನ್ನು ಬಳಸಿಕೊಳ್ಳಬೇಕು. ಮೆಸ್ಕಾಂ ವ್ಯಾಪ್ತಿಯ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂಗಾರು ತೀವ್ರಗೊಂಡಿದ್ದು, ಮಳೆಯ ಸಂದರ್ಭದಲ್ಲಿ ಸಂಭವಿಸಬಹುದಾದ ಅನಿರೀಕ್ಷಿತ ಅನಾಹುತಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಮೆಸ್ಕಾಂ ಸನ್ನದ್ಧವಾಗಿದೆ ಎಂದು ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ