ಅಹಮದಾಬಾದ್‌ನ ವಿಮಾನ ದುರಂತ: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಮೌನ ಪ್ರಾರ್ಥನೆ

Upayuktha
0 minute read
0


ಪುತ್ತೂರು: ಅಹಮದಾಬಾದ್ ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ ಗೆ ತೆರಳುತ್ತಿದ್ದ ವಿಮಾನ ದುರಂತಕ್ಕೀಡಾಗಿ 241 ಮಂದಿ ಪ್ರಯಾಣಿಕರು ದಾರುಣವಾಗಿ ಮೃತಪಟ್ಟಿರುವ ಹಿನ್ನಲೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ  ಮೃತಪಟ್ಟವರ ಆತ್ಮಕ್ಕೆ ಸದ್ಗತಿಯನ್ನು ಕೋರಿ ಮೌನ ಪ್ರಾರ್ಥನೆ ನಡೆಸಲಾಯಿತು. 


ಈ ಸಂದರ್ಭದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಿ ಚರಣ್ ರೈ. ಎಂ ಮಾತನಾಡಿ, ಇದು ದೇಶ ಕಂಡ ಆಘಾತಕಾರಿ ಘಟನೆಗಳಲ್ಲೊಂದು, ಮೃತರ ಕುಟುಂಬ ವರ್ಗದವರಿಗೆ  ದುಖಃವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ನುಡಿದರು. ವೈದೇಹಿ ಸಭಾಂಗಣದಲ್ಲಿ ದೈನಂದಿನ ಪ್ರಾರ್ಥನೆಯ ಅವಧಿಯಲ್ಲಿ  ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಎಲ್ಲಾ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top