ಎಸ್.ಡಿ.ಎಂ. ಬಿ.ಎಡ್ ಕಾಲೇಜು: ಮಲೇರಿಯಾ, ಡೆಂಗ್ಯೂ ವಿರೋಧಿ ಮಾಸಾಚರಣೆ; ಆರೋಗ್ಯ ಮಾಹಿತಿ ಕಾರ್ಯಕ್ರಮ

Upayuktha
1 minute read
0


ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಲೇರಿಯಾ ಹಾಗೂ ಡೆಂಗ್ಯೂ ವಿರೋಧಿ ಮಾಸಾಚರಣೆ ಪ್ರಯುಕ್ತ ಆರೋಗ್ಯ ಮಾಹಿತಿ ಕಾರ್ಯಕ್ರಮ ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಜಿರೆ ಪ್ರ‍್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಸ್ವತಂತ್ರ ರಾವ್ ಕೆ ಟಿ ಇವರು ಮಲೇರಿಯಾ ಹಾಗೂ ಡೆಂಗ್ಯೂ ರೋಗಗಳ ಲಕ್ಷಣಗಳು, ಚಿಕಿತ್ಸೆ ಮತ್ತು ತಡೆಗಟ್ಟುವ ವಿಧಾನಗಳನ್ನು ತಿಳಿಸಿ ನಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕೆಂದು ತಿಳಿಸಿದರು.


ಹಾಗೆಯೇ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಅನುಷಾ ಡಿ. ಜೆ ಇವರು ಕಾರ್ಯಕ್ರಮವನ್ನು ಉದ್ದೇಶಿಸಿ ಆರೋಗ್ಯವೇ ಭಾಗ್ಯ, ಆಲಸ್ಯ ಬಿಟ್ಟು ನಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಿ. ಆರೋಗ್ಯ ಇಲಾಖೆ ಮತ್ತು ಸರ್ಕಾರ ನಮ್ಮ ಆರೋಗ್ಯದ ಕಾಳಜಿ ವಹಿಸುವಾಗ ಆರೋಗ್ಯದ ಕಾಳಜಿಯನ್ನು ಸಾರ್ವಜನಿಕರಾದ ನಾವು ವಹಿಸಬೇಕೆಂದು ಹೇಳಿದರು.


ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ತಿರುಮಲೇಶ್ ರಾವ್ ಎನ್ ಕೆ, ವಿದ್ಯಾಶ್ರಿ ಪಿ, ಮಂಜು ಆರ್, ಆದ್ಯಾ ಯು, ಗ್ಲೆನ್ ಶರಲ್ ಪಿಂಟೋ ಹಾಗೂ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ದ್ವಿತೀಯ ಬಿ.ಎಡ್. ಪ್ರಶಿಕ್ಷಣಾರ್ಥಿ ಅಕ್ಷಿತಾ ಎಂ ನಿರ್ವಹಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top