ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ: ಅರ್ಜಿ ಆಹ್ವಾನ

Chandrashekhara Kulamarva
0


ಮಂಗಳೂರು: 2025-26ನೇ ಸಾಲಿನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಯೋಜನೆಗಳ ವಿವರ: ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವತಂತ್ರ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ.  


ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್  http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಮಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನಿಗಮದ ವೆಬ್‍ಸೈಟ್ www.dbcdc.karnataka.gov.in ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 8050770004 ಅಥವಾ 8050770005 ಸಂಪರ್ಕಿಸಬಹುದು ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top