ಕುಳಾಯಿ ಫಿಶರೀಸ್ ಶಾಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರ ವಿತರಣೆ

Chandrashekhara Kulamarva
0


ಕುಳಾಯಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಳಾಯಿ ಫಿಷರೀಶ್‌ನ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳನ್ನು ಕೊಡುಗೆಯಾಗಿ ನಿರಂತರವಾಗಿ ಹತ್ತು ವರ್ಷಗಳಿಂದ ನೀಡಿ ಪ್ರೋತ್ಸಾಹಿಸುತ್ತಿರುವ ಬೈಕಂಪಾಡಿ ಆಟೊ ರಿಕ್ಷಾ ಚಾಲಕರ ಮಾಲಕರ ಸಂಘದ ವತಿಯಿಂದ ಪ್ರಸಕ್ತ ವರ್ಷದ ಶೈಕ್ಷಣಿಕ ಪರಿಕರಗಳ ವಿತರಣಾ ಕಾರ್ಯಕ್ರಮ ಶಾಲೆಯಲ್ಲಿ ನಡೆಯಿತು.


ಸಂಘದ ಗೌರವಾಧ್ಯಕ್ಷ ಪೂವಪ್ಪ ದೇವಾಡಿಗ ಮಾತನಾಡಿ, ವಿದ್ಯಾರ್ಥಿಗಳು ಉತ್ತಮವಾಗಿ ಕಲಿತು ಲಭ್ಯವಾಗುವ ಅವಕಾಶಗಳನ್ನು ಸದ್ಭಳಕೆ ಮಾಡಿಕೊಳ್ಳ ಬೇಕು ಎಂದರು.


ಅಧ್ಯಕ್ಷತೆ ವಹಿಸಿದ್ದ ನಿವೃತ್ತ ಪ್ರಾಂಶುಪಾಲ ಕೃಷ್ಣಮೂರ್ತಿ ಮಾತನಾಡಿ, ತಮ್ಮ ಶ್ರಮದ ದುಡಿಮೆಯ ಉಳಿಕೆಯಲ್ಲಿ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುತ್ತಿರುವ ಸಂಘದ ಸದಸ್ಯರ ಕಾರ್ಯ ಶ್ಲಾಘನೀಯ ಎಂದರು.


ನೋಟ್ಸ್ ಬುಕ್, ಶಾಲಾ ಬ್ಯಾಗ್, ಕೊಡೆ, ಬೈಂಡ್ ಪೇಪರ್ ಸ್ಯಾಂಡಲ್ಸ್, ಲೇಖನಿ ಸಾಮಗ್ರಿ ಮತ್ತು ನಿಘಂಟುಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.


ಹಳೆ ವಿದ್ಯಾರ್ಥಿ ಸಂಘದ ಸದಸ್ಯ ತೇಜಪಾಲ್ ಪುತ್ರನ್ ಶುಭ ಹಾರೈಸಿದರು. ಆಟೋ ರಿಕ್ಷಾ ಚಾಲಕರ ಮಾಲಕರ ಸಂಘದ ಅಧ್ಯಕ್ಷ ನವೀನ್ ಶ್ರೀಯಾನ್, ಪ್ರಧಾನ ಕಾರ್ಯದರ್ಶಿ ರೋಹಿತ್ ಪುತ್ರನ್, ಕೋಶಾಧಿಕಾರಿ ಫ಼ಾರೂಕ್, ಸದಸ್ಯರಾದ ಅಬ್ದುಲ್ ಗಫೂರ್, ವಿನೀತ್ ಸುವರ್ಣ, ಸುಧೀರ್ ಸುವರ್ಣ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಶೋಭಾ ಸ್ವಾಗತಿಸಿ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top