ಬಂಟ್ವಾಳ: ಲಾರಿ- ದ್ವಿಚಕ್ರ ವಾಹನ ಅಪಘಾತ, ಸವಾರ ಸ್ಥಳದಲ್ಲೇ ಸಾವು

Upayuktha
0



ಬಂಟ್ವಾಳ: ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಶಂಭೂರು ಕೊಪ್ಪಳ ನಿವಾಸಿ ಚಿದಾನಂದ (50) ಎಂಬವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬಿ.ಸಿ. 
ರೋಡಿನ ಅಜ್ಜಿಬೆಟ್ಟು ಕ್ರಾಸ್‌ನಲ್ಲಿ ಜೂ. 30ರಂದು ನಡೆದಿದೆ.


ಸ್ಕೂಟ‌ರ್ ಸವಾರ ಚಿದಾನಂದ ಅವರು ಬಿ.ಸಿ.ರೋಡು ಪೇಟೆಯಿಂದ ಅಜ್ಜಿಬೆಟ್ಟು ಕ್ರಾಸ್‌ನಲ್ಲಿ ಕ್ರಾಸ್ ಮಾಡುವ ವೇಳೆ  ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಲಾರಿಯ ಚಕ್ರದಡಿ ಸಿಲುಕಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ಚಿದಾನಂದ ಅವರು ಬಂಟ್ವಾಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿಯಾಗಿದ್ದಾರೆ. ಇವರಿಗೆ ಒಂದು ಹೆಣ್ಣು ಮತ್ತು ಗಂಡು ಮಗುವಿದೆ. ಪತ್ನಿ ಶಂಭೂರು ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಿ.ಸಿ ರೋಡ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top