ಬಳ್ಳಾರಿ: ಲಿಡ್ಕರ್ ನಿಗಮದ ಸೌಲಭ್ಯ ವಿತರಣೆ

Upayuktha
0


ಬಳ್ಳಾರಿ: ಡಾ ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ದಾವಣಗೆರೆ ಜಿಲ್ಲೆ ಹೊನ್ನಳ್ಳಿಯ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ 2022-23 ನೇ ಸಾಲಿನ ಚರ್ಮ ವಸ್ತುಗಳ 60 ದಿನಗಳ ತರಬೇತಿ ಪಡೆದ ಫಲಾನುಭವಿಗಳಿಗೆ ಸೌಲಭ್ಯ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.


ಲಿಡ್ಕರ್ ಅಧ್ಯಕ್ಷ ಮುಂಡ್ರಿಗಿ ನಾಗರಾಜ್ ಮಾತನಾಡಿ, ಲಿಡ್ಕರ್ ನಿಗಮದ ಯೋಜನೆಗಳ ಬಗ್ಗೆ ಮಾಹಿತಿ ನೀಡಿ, ಫಲಾನುಭವಿಗಳು ನಿಗಮದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕೆಂದು ಅಭಿಪ್ರಾಯ ಪಟ್ಟರು.


ಈ ಸಂದರ್ಭದಲ್ಲಿ ಹೊನ್ನಳ್ಳಿ ಶಾಸಕ ಡಿ.ಜಿ. ಶಾಂತನಗೌಡ, ಸಮಾಜ ಕಲ್ಯಾಣ ಇಲಾಖೆ ಉಪ ನೀರ್ದೇಶಕ ಮಲ್ಲಿಕಾರ್ಜುನ, ಲಿಡ್ಕರ್ ಜಿಲ್ಲಾ ಸಂಯೋಜಕ ವೆಂಕಟೇಶ್, ಮುಖಂಡರಾದ ರಾಜಪ್ಪ, ನವೀನ್, ಜಿ ಗೋವರ್ಧನ, ಫೋಟೊರಾಜ, ಸಣ್ಣನಾಗರಾಜ ಮತ್ತಿತರರು ಉಪಸ್ಥಿತರಿದ್ದರು.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top