ಬೆಳ್ತಂಗಡಿ: ಗೀತೆ ಜತೆ ಸಾಹಿತ್ಯ ಸಾಂಗತ್ಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ (ನೋಂ) ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ನಡೆದ ಉಪನ್ಯಾಸ ಮಾಲಿಕೆಯ ಎಂಟನೇ ಅಧ್ಯಾಯ ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಭವನದಲ್ಲಿ ಭಾನುವಾರ (ಜೂ.22) ನಡೆಯಿತು.
ಗೀತೆ ಜತೆ ಸಾಹಿತ್ಯ ಸಾಂಗತ್ಯ ಒಂದು ವರ್ಷದ ಸಾಹಿತ್ಯ ಪರ್ವ ಉಪನ್ಯಾಸ ಮಾಲಿಕೆಯ ಎಂಟನೇ ಅಧ್ಯಾಯದ ಉಪನ್ಯಾಸವನ್ನು ರಾಮಕೃಷ್ಣ ಭಟ್ ಚೊಕ್ಕಾಡಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಸಂತ ಶೆಟ್ಟಿ ಶ್ರದ್ಧಾ ಇವರು ವಹಿಸಿದ್ದರು. ಅತಿಥಿಗಳು ಶಾರದ ಮಾತೆ ಮತ್ತು ಭಾರತ ಮಾತೆಯ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಗೈದರು.
ಶ್ರೀಮತಿ ಮೇಘನಾ ಪ್ರಶಾಂತ್ ಇವರು ಶಾರದಾ ಸ್ತುತಿಯನ್ನು ಹಾಡಿದರು. ಕಾರ್ಯದರ್ಶಿ ಶ್ರೀಮತಿ ಸುಭಾಷಿಣಿಯವರ ರಚನೆಯ ಆಶಯಗೀತೆಯನ್ನು ಶ್ರೀಮತಿ ಅಶ್ವಿಜ ಶ್ರೀಧರ್ ಇವರು ಸುಶ್ರಾವ್ಯವಾಗಿ ಹಾಡಿದರು. ಶ್ರೀಮತಿ ಪ್ರೇಮಲತಾ ಗಣೇಶ್ ಇವರು ಆಗಮಿಸಿದ್ದ ಸರ್ವರನ್ನು ಸ್ವಾಗತಿಸಿದರು.
ಸಮಿತಿಯ ಕಾರ್ಯದರ್ಶಿ ಶ್ರೀಮತಿ ಸುಭಾಷಿಣಿ ಮತ್ತು ಪ್ರಕಾಶ್ ನಾರಾಯಣ ಅಭ್ಯಾಗತರನ್ನು ತಾಂಬೂಲ ನೀಡಿ ಗೌರವಿಸಿದರು.
ರಾಮಕೃಷ್ಣ ಭಟ್ ಚೊಕ್ಕಾಡಿ ಇವರು ಭಗವದ್ಗೀತೆಯ ಎಂಟನೇ ಅಧ್ಯಾಯಲ್ಲಿ ಶ್ರೀ ಕೃಷ್ಣನು ಉಪನಿಷತ್ತುಗಳು ವಿವರಿಸುವ ಮಹತ್ವದ ಪರಿಕಲ್ಪನೆಗಳು ಮತ್ತು ಪದಗಳನ್ನು ಸಂಕ್ಷಿಪ್ತವಾಗಿ ವಿವರಿಸುತ್ತಾನೆ, ಮರಣದ ನಂತರ ಆತ್ಮದ ಗಮ್ಯ ಸ್ಥಾನವನ್ನು ನಿರ್ಧರಿಸುವ ಅಂಶಗಳನ್ನು ಹೇಗೆ ವಿವರಿಸುತ್ತಾನೆ ಎಂಬುವುದನ್ನು ತಿಳಿಸುತ್ತಾ.., ಬ್ರಹ್ಮ, ಅಧ್ಯಾತ್ಮ, ಅಧಿಭೂತ- ಅಧಿದೈವ ಮತ್ತು ಅಧಿಯಜ್ಞ ಯಾರು? ಮರಣದ ಸಮಯದಲ್ಲಿ ಅವನು ಹೇಗೆ ತಿಳಿಯಲ್ಪಡುತ್ತಾನೆ ಎನ್ನುವುದರ ಬಗ್ಗೆ ಶ್ರೀ ಕೃಷ್ಣನ ಮಾತುಗಳನ್ನು ಅತ್ಯಂತ ಮನೋಜ್ಞವಾಗಿ ವಿವರಿಸಿದರು.
ವಸಂತ ಶೆಟ್ಟಿ ಶ್ರದ್ಧಾ ಇವರು ತಮ್ಮ ಅಧ್ಯಕ್ಷೀಯ ಮಾತಿನಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ಸಾಹಿತ್ಯ ಸೇವೆಯನ್ನು ಅಭಿನಂದಿಸಿ, ಭಗವದ್ಗೀತೆಯ ಮಹತ್ವವನ್ನು ತನ್ನದೇ ಮಾತಿನಲ್ಲಿ ಸಂಕ್ಷಿಪ್ತವಾಗಿ ವಿವರಿಸಿದರು. ಇವರಿಗೆ ದಿವ ಕೊಕ್ಕಡ ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ರಾಮಕೃಷ್ಣ ಭಟ್ ಚೊಕ್ಕಾಡಿ ಇವರಿಗೆ ತ್ರಿವಿಕ್ರಮ ಹೆಬ್ಬಾರ್ ಇವರು ಪುಸ್ತಕ ಸ್ಮರಣಿಕೆ ನೀಡಿ ಗೌರವಿಸಿದರು. ಶ್ರೀಮತಿ ಆಶಾ ಅಡೂರು ಇವರು ಕಾರ್ಯಕ್ರಮ ನಿರೂಪಿಸಿ, ರಮೇಶ್ ಮಯ್ಯ ಇವರು ಸರ್ವರಿಗೂ ಧನ್ಯವಾದವನ್ನಿತ್ತರು.
ಶಾಂತಿ ಮಂತ್ರದೊಂದಿಗೆ ಕಾರ್ಯಕ್ರಮವು ಸಂಪನ್ನಗೊಂಡಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ