ಮಂಗಳೂರು: ದಿವ್ಯಾಂಗರಿಗಾಗಿ ಸಮರ್ಪಿತ ಸಂಘಟನೆಯಾಗಿರುವ ಸಕ್ಷಮ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಜುಲೈ 6ರಂದು ಭಾನುವಾರ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ಜೈ ತುಳುನಾಡ್ ಮಂಗಳೂರು ಘಟಕ, ಸೇವಾ ಭಾರತಿ ಮಂಗಳೂರು ಮತ್ತು ವೆನ್ಲಾಕ್ ಆಸ್ಪತ್ರೆಯ ಸಹಯೋಗದಲ್ಲಿ ಈ ಶಿಬಿರ ಏರ್ಪಡಿಸಲಾಗುತ್ತಿದೆ. ದೇರೆಬೈಲ್- ಕೊಂಚಾಡಿಯ ವಿದ್ಯಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಗ್ಗೆ 8:30ರಿಂದ ಮಧ್ಯಾಹ್ನ 1:00 ಗಂಟೆಯ ವರೆಗೆ ಶಿಬಿರ ನಡೆಯಲಿದೆ.
ತಲಸ್ಸೆಮಿಯಾ ಮತ್ತು ಸಿಕಲ್ ಸೆಲ್ ಕಾಯಿಲೆಯಿಂದ ಬಳಲುತ್ತಿರುವವರಿಗೆ ಪದೇ ಪದೇ ರಕ್ತದ ಬದಲಾವಣೆ (ಮರುಪೂರಣ) ಅವಶ್ಯಕತೆಯಿರುತ್ತದೆ. ವಿಶೇಷವಾಗಿ ಇಂಥವರಿಗೆ ನೆರವಾಗುವ ಉದ್ದೇಶದಿಂದ ಈ ರಕ್ತದಾನ ಶಿಬಿರ ನಡೆಸಲಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ ಬಂದು ರಕ್ತದಾನ ಮಾಡಬೇಕಾಗಿ ಸಕ್ಷಮ ದ.ಕ ಜಿಲ್ಲಾ ಘಟಕದ ಅಧ್ಯಕ್ಷರಾದ ರಾಜಶೇಖರ ಕಾಕುಂಜೆ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಶಿಬಿರದ ಕುರಿತು ಹೆಚ್ಚಿನ ಮಾಹಿತಿಗಾಗಿ 9945562539, 9900531679 ಈ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ