ನೂತನ ಕಾರಾಗೃಹ ನಿರ್ಮಾಣ: ಗೃಹ ಸಚಿವರ ಭೇಟಿ

Chandrashekhara Kulamarva
0


ಮಂಗಳೂರು: ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು  ಮುಡಿಪು ಕುರ್ನಾಡು ಸಮೀಪದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಜಿಲ್ಲಾ ಕಾರಾಗೃಹ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದರು.


ನಿರ್ಮಾಣ ಹಂತದ ಕಟ್ಟಡ   ವೀಕ್ಷಿಸಿದ ಅವರು ಕಾಮಗಾರಿಗಳ ಮಾಹಿತಿ ಪಡೆದರು. ಕಾಮಗಾರಿಯನ್ನು ಉತ್ತಮ  ಗುಣಮಟ್ಟದಲ್ಲಿ ತ್ವರಿತಗತಿಯಲ್ಲಿ ನಡೆಸಿ ಆದಷ್ಟು ಬೇಗನೆ ಪೂರ್ಣಗೊಳಿಸಬೇಕು ಎಂದು ಅವರು ಸೂಚಿಸಿದರು.


ಕಾರಾಗೃಹದ ಆವರಣ ಗೋಡೆ ಸೇರಿದಂತೆ ಅತ್ಯುನ್ನತ ಭದ್ರತಾ ವ್ಯವಸ್ಥೆ ನೂತನ ಕಾರಾಗೃಹ  ಸಂಕೀರ್ಣದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.  ಕಾರಾಗೃಹ ಇಲಾಖೆ ಡಿಐಜಿ ದಿವ್ಯಶ್ರೀ ಅವರು ಸಚಿವರಿಗೆ ವಿವರ ನೀಡಿದರು.


ಈ ಸಂದರ್ಭದಲ್ಲಿ ಶಾಸಕರಾದ ಅಶೋಕ್ ಕುಮಾರ್ ರೈ, ಮಂಜುನಾಥ ಭಂಡಾರಿ, ಐವನ್ ಡಿಸೋಜಾ, ಪೋಲಿಸ್ ಮಹಾ ನಿರ್ದೇಶಕ ಎಂ.ಎ.ಸಲೀಂ ,  ಪಶ್ಚಿಮ ವಲಯ ಐಜಿಪಿ  ದೇವಜ್ಯೋತಿ ರೇ ಮತ್ತಿತರರು ಇದ್ದರು.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top