ದಾವಣಗೆರೆ: ದಾವಣಗೆರೆಯ ಐತಿಹಾಸಿಕ ಪರಂಪರೆಯ ಚನ್ನಗಿರಿ ವಿರೂಪಾಕ್ಷಪ್ಪ ಧರ್ಮಶಾಲಾ ಟ್ರಸ್ಟ್‌ನ ಅಧ್ಯಕ್ಷರಾದ ಹಿರಿಯ ಚೇತನ, ಆಧುನಿಕ ಭೀಷ್ಮ ಎಂದೇ ಹೆಸರುವಾಸಿಯಾದ ಚನ್ನಗಿರಿ ವಿರೂಪಾಕ್ಷಪ್ಪರವರು 99ನೇ ವರ್ಷ ಮುಗಿದು 100ನೇ ವರ್ಷಕ್ಕೆ ಕಾಲಿಟ್ಟರು. ಈ ಸಂದರ್ಭದಲ್ಲಿ ಇವರಿಗೆ ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕಲಾಕುಂಚದ ಸಂಸ್ಥಾಪಕ ಸಾಲಿಗ್ರಾಮ ಗಣೇಶ್ ಶೆಣೈ, ಅಧ್ಯಕ್ಷ ಕೆ.ಹೆಚ್. ಮಂಜುನಾಥ್, ಮಹಿಳಾ ವಿಭಾಗದ ಸಂಸ್ಥಾಪಕಿ ಜ್ಯೋತಿ ಗಣೇಶ್ ಶೆಣೈ, ಗೌರವ ಅಧ್ಯಕ್ಷೆ ವಸಂತಿ ಮಂಜುನಾಥ್, ಕಲಾಕುಂಚ ಕೆ.ಬಿ. ಬಡಾವಣೆ ಶಾಖೆಯ ಅಧ್ಯಕ್ಷ ವಿ.ಕೃಷ್ಣಮೂರ್ತಿ, ಕಲಾಕುಂಚದ ಪ್ರಧಾನ ಕಾರ್ಯದರ್ಶಿ ಕೆ.ಸಿ. ಉಮೇಶ್, ಚನ್ನಗಿರಿ ವಿರೂಪಾಕ್ಷಪ್ಪ ಧರ್ಮಶಾಲಾ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಭರತ್, ಚಂದ್ರಶೇಖರ ಅಡಿಗ, ಕಲಾಕುಂಚ ಸದಸ್ಯರಾದ ಲಕ್ಷ್ಮಿ ಸುರೇಶ್, ಸ್ವರ್ಣಲತಾ ಪ್ರಕಾಶ್ ಮುಂತಾದವರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ