ದಾವಣಗೆರೆ: ಜೂ. 10 ರಂದು ಕಲಾಕುಂಚದಿಂದ ಉಚಿತ ಯೋಗ ಶಿಬಿರ ಉದ್ಘಾಟನೆ

Chandrashekhara Kulamarva
0


ದಾವಣಗೆರೆ: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಿದ್ದವೀರಪ್ಪ ಬಡಾವಣೆಯ ಶಾಖೆಯ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಜೂನ್ 10 ರಂದು ದಾವಣಗೆರೆ ಸಿದ್ದವೀರಪ್ಪ ಬಡಾವಣೆಯ ಶ್ರೀ ಯಗಟಿ ಮಲ್ಲಿಕಾರ್ಜುನ ನಿಲಯದ ಸಭಾಂಗಣದಲ್ಲಿ ಪ್ರತಿದಿನ ಸಂಜೆ 5 ಗಂಟೆಗೆ ಉಚಿತ ಯೋಗ ಶಿಬಿರ ಉದ್ಘಾಟನೆಯಾಗಲಿದೆ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಸುಮಾ ಏಕಾಂತಪ್ಪ ತಿಳಿಸಿದ್ದಾರೆ.


ದಾವಣಗೆರೆಯ ಆದರ್ಶ ಯೋಗ ಪ್ರತಿಷ್ಠಾನದ ಸಂಸ್ಥಾಪಕರು ಹಿರಿಯ ಯೋಗ ತಜ್ಞರಾದ ಡಾ. ರಾಘವೇಂದ್ರ ಗುರೂಜಿಯವರು ಉದ್ಘಾಟಿಸಲಿದ್ದಾರೆ. ಸಂಸ್ಥೆಯ ಸಂಸ್ಥಾಪಕ ಸಾಲಿಗ್ರಾಮ ಗಣೇಶ್‍ ಶೆಣೈ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಭರತಾಂಜಲಿ ನೃತ್ಯ ಕಲಾ ಅಕಾಡೆಮಿಯ ಸಂಸ್ಥಾಪಕರಾದ ಡಾ|| ಮಂಗಳಾ ಶೇಖರ್ ಆಗಮಿಸಲಿದ್ದಾರೆ. ಯೋಗ ಪಟು ಶಿಕ್ಷಕಿಯರಾದ ಶ್ರೀಮತಿ ಲೀಲಾ ಸುಭಾಷ್, ಶ್ರೀಮತಿ ಸಂಧ್ಯಾ ಶ್ರೀನಿವಾಸ, ಗೌರವ ಉಪಸ್ಥಿತರಿರುತ್ತಾರೆ. ಯೋಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಉಚಿತ ಯೋಗ ಶಿಬಿರ ಯಶಸ್ವಿಗೊಳಿಸಬೇಕಾಗಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ವಿನಂತಿಸಿದ್ದಾರೆ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top