ಜೂ.21; ಕಲಾಕುಂಚದಿಂದ ಉಚಿತ ಯೋಗ ಶಿಬಿರ ಸಮಾರೋಪ ಸಮಾರಂಭ

Upayuktha
0



ದಾವಣಗೆರೆ: ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಿದ್ದವೀರಪ್ಪ ಬಡಾವಣೆಯ ಶಾಖೆಯ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಹಮ್ಮಿಕೊಳ್ಳಲಾದ ಉಚಿತ ಯೋಗ ಶಿಬಿರ ಜೂನ್ 21 ರಂದು ಶನಿವಾರ ಸಂಜೆ 4 ಗಂಟೆಗೆ ಸಿದ್ದವೀರಪ್ಪ ಬಡಾವಣೆಯ 4ನೇ ತಿರುವಿನಲ್ಲಿರುವ ಶ್ರೀ ಯಗಟಿ ಮಲ್ಲಿಕಾರ್ಜುನ ನಿಲಯದ ಸಭಾಂಗಣದಲ್ಲಿ   ಸಮಾರೋಪ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಕಲಾಕುಂಚ ಸಿದ್ದವೀರಪ್ಪ ಬಡಾವಣೆ ಶಾಖೆಯ ಅಧ್ಯಕ್ಷರಾದ ಲಲಿತ ಕಲ್ಲೇಶ್ ತಿಳಿಸಿದ್ದಾರೆ.


ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್‌ಶೆಣೈಯವರು ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಾಗತಿಕ ಲಿಂಗಾಯತ ಮಹಾಸಭಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಕುಸಮ ಲೋಕೇಶ್, ಕಲಾಕುಂಚ ಡಿ.ಸಿ.ಎಂ. ಶಾಖೆಯ ಅಧ್ಯಕ್ಷರಾದ ಶಾರದಮ್ಮ ಶಿವನಪ್ಪ, ಕಲಾಕುಂಚ ಎಲೆಬೇತೂರು ಶಾಖೆಯ ಅಧ್ಯಕ್ಷರಾದ ಡಾ|| ನಿರ್ಮಲಾ ವಿಶ್ವನಾಥ್ ಕುಲಕರ್ಣಿ ಆಗಮಿಸಲಿದ್ದು, ಯೋಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಮಾರಂಭ ಯಶಸ್ವಿಗೊಳಿಸಬೇಕಾಗಿ ಕಲಾಕುಂಚ ಸಿದ್ದವೀರಪ್ಪ ಬಡಾವಣೆಯ ಶಾಖೆಯ ಪ್ರಧಾನ ಕಾರ್ಯದರ್ಶಿ ಸುಮಾ ಏಕಾಂತಪ್ಪ ವಿನಂತಿಸಿದ್ದಾರೆ.




Post a Comment

0 Comments
Post a Comment (0)
To Top