ದಾವಣಗೆರೆ: ಯಕ್ಷಗಾನ ಕ್ಷೇತ್ರದ ಹಿರಿಯ ಪೌರಾಣಿಕ ಯಕ್ಷಗಾನ ಪ್ರಸಂಗಕರ್ತರು ಹಾಗೂ ವಿಶ್ರಾಂತ ಶಿಕ್ಷಕರು, ಯಕ್ಷ ಸಾಹಿತಿ, ಅರ್ಥಧಾರಿಗಳು, ಯಕ್ಷಗಾನ ಕ್ಷೇತ್ರದ ದಿಗ್ಗಜ ಕಂದಾವರ ರಘುರಾಮ ಶೆಟ್ಟಿಯವರಿಗೆ ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದಿಂದ `ಕೆಂಪೇಗೌಡ’ ರಾಜ್ಯ ಪ್ರಶಸ್ತಿಯನ್ನು ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯೋತ್ಸವದ ಪ್ರಯುಕ್ತ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಕಂದಾವರ ರಘುರಾಮ ಶೆಟ್ಟಿ ಪ್ರತಿಷ್ಠಾನದ ನಿರ್ದೇಶಕರಾದ ಬೇಳೂರು ಸಂತೋಷ್‌ಕುಮಾರ್ ಶೆಟ್ಟಿ ತಿಳಿಸಿದ್ದಾರೆ.
ಪರಮಪೂಜ್ಯ ಶ್ರೀ ಡಾ. ನಿರ್ಮಲಾನಂದ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಕರ್ನಾಟಕ ಸರ್ಕಾರದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಮಲ್ಲೇಶ್ವರಂ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ.ಸಿ.ಎನ್.ಅಶ್ವಥ್‌ನಾರಾಯಣರವರ ನೇತೃತ್ವದಲ್ಲಿ ಗಣ್ಯ ಮಾನ್ಯರ ಸಮ್ಮುಖದಲ್ಲಿ ಈಕಾರ್ಯಕ್ರಮ ನಡೆಯಲಿದೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಈ ಅದ್ದೂರಿಯ ವಿಜೃಂಭಣೆಯಿಂದ ನಡೆಯುತ್ತಿರುವ ಭವ್ಯ ವೇದಿಕೆಯಲ್ಲಿ ಕೆಂಪೇಗೌಡ ರಾಜ್ಯ ಪ್ರಶಸ್ತಿಗೆ ಭಾಜನರಾದ ಯಕ್ಷ ಸಂಪತ್ತು 8 ದಶಕಗಳಿಂದ ಯಕ್ಷ ಸೇವೆಯನ್ನು ಯಾವುದೇ ಸ್ವಾರ್ಥವಿಲ್ಲದೇ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಕಂದಾವರ ರಘುರಾಮ ಶೆಟ್ಟಿಯವರಿಗೆ ದಾವಣಗೆರೆಯ ಯಕ್ಷರಂಗ, ಯಕ್ಷಗಾನ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್‌ಶೆಣೈ, ಯಕ್ಷರಂಗ ಅಧ್ಯಕ್ಷ ಮಲ್ಯಾಡಿ ಪ್ರಭಾಕರ ಶೆಟ್ಟಿ ಸೇರಿದಂತೆ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಅಭಿನಂದಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ