ಅಧಿಕಾರಿಗಳ ಅಮಾನತಿಗೆ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹ
ಬೆಂಗಳೂರು: ಮಲೆ ಮಹದೇಶ್ವರ ವನ್ಯಜೀವಿ ಧಾಮದ ಮೀನ್ಯಂ ಅರಣ್ಯದಲ್ಲಿ ದುಷ್ಕರ್ಮಿಗಳ ವಿಷ ಪ್ರಾಶನಕ್ಕೆ ಐದು ಹುಲಿಗಳು ಮೃತಪಟ್ಟಿದ್ದು ಇದು ವನ್ಯಜೀವಿ ಸಂರಕ್ಷಣಾ ಕ್ಷೇತ್ರದಲ್ಲಿ ನಡೆದ ಅತಿ ದೊಡ್ಡ ದುರಂತವಾಗಿದೆ.
ಈ ಹುಲಿಗಳ ಸಾವಿನ ತನಿಖೆ ಮಾಡಲು ವಿಶೇಷ ತಂಡವನ್ನು ರಚಿಸಬೇಕೆಂದು ಮತ್ತು ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳನ್ನು ಈ ಕೂಡಲೇ ಅಮಾನತು ಮಾಡಬೇಕೆಂದು ಮತ್ತು ಸಾವಿಗೆ ಕಾರಣರಾದವರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಿ ತಕ್ಕ ಶಿಕ್ಷೆ ವಿಧಿಸಬೇಕೆಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಅರಸ್ ಅವರು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ್ ಖಂಡ್ರೆ ಅವರಿಗೆ ಆಗ್ರಹಿಸಿದ್ದಾರೆ.
ಸ್ಥಳೀಯ ಅಧಿಕಾರಿಗಳ ಬೇಜವಾಬ್ದಾರಿ, ಕಾಡಂಚಿನ ಗ್ರಾಮಗಳ ಜನರ ದ್ವೇಷಕ್ಕೆ ಅತಿ ಅಪರೂಪದ ಹುಲಿ ಕುಟುಂಬವೇ ಸರ್ವನಾಶವಾಗಿದೆ. ತಾಯಿ ಮತ್ತು ನಾಲ್ಕು ಹುಲಿಗಳ ಘೋರ ಸಾವು ವನ್ಯಜೀವಿ ಸಂರಕ್ಷಣಾ ಯೋಜನೆಗೆ ದೊಡ್ಡ ಹೊಡೆತವಾಗಿದೆ. ಕರ್ನಾಟಕ ರಾಜ್ಯ ದೇಶದಲ್ಲಿಯೇ ಹುಲಿಗಳ ಸಂಖ್ಯೆಯಲ್ಲಿ 2 ನೇ ಸ್ಥಾನದಲ್ಲಿದೆ. ಅಳಿವಿನಂಚಿನಲ್ಲಿರುವ ಹುಲಿಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ.
ಈ ಹುಲಿಗಳ ಸಾವಿನ ತನಿಖೆ ಮಾಡಲು ವಿಶೇಷ ತಂಡವನ್ನು ರಚಿಸಬೇಕೆಂದು ಮತ್ತು ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳನ್ನು ಈ ಕೂಡಲೇ ಅಮಾನತು ಮಾಡಬೇಕೆಂದು ಮತ್ತು ಸಾವಿಗೆ ಕಾರಣರಾದವರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಿ ತಕ್ಕ ಶಿಕ್ಷೆ ವಿಧಿಸಬೇಕೆಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಅರಸ್ ಹಾಗೂ ಸಂಚಾಲಕರಾದ ಟಿ. ರುದ್ರಮುನಿ ಆಗ್ರಹಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ