ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆ (ರಿ.) ಕಾಸರಗೋಡು ಗೌರವ ಸಲಹೆಗಾರರಾಗಿ ದೀಪಕ್ ಪೆರ್ಮುದೆ ಆಯ್ಕೆ

Upayuktha
0


ಕಾಸರಗೋಡು: ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆ (ರಿ.) ಕಾಸರಗೋಡು ಇದರ ನೂತನ ಗೌರವ ಸಲಹೆಗಾರರಾಗಿ ಮಂಗಳೂರಿನ ಕಲಾ, ಸಾಹಿತ್ಯ, ಸಾಂಸ್ಕೃತಿಕ ಸಂಘಟಕ ದೀಪಕ್ ಪೆರ್ಮುದೆ, ಮಂಗಳೂರು ಇವರನ್ನು  ಸಮಿತಿಯು ಸರ್ವಾನುಮತದಿಂದ ಆಯ್ಕೆಗೊಳಿಸಿದೆ.


ಇವರು ಮಂಗಳೂರು ಪರಿಸರದ ವಿವಿಧ ಸಂಘ-ಸಂಸ್ಥೆ, ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು,ಗ್ರಾಮ ಪಂಚಾಯತ್ ಪೆರ್ಮುದೆ ಇದರ ಮಾಜಿ ಸದಸ್ಯರಾಗಿದ್ದಾರೆ. ಪೆರ್ಮುದೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರೂ ಹೌದು.


ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಚೇಲ್ಯರು- ಮದ್ಯ- ಕೊಡಿಪಾಡಿ, ಮಂಗಳೂರು ಇದರ ಮಾಜಿ ಅಧ್ಯಕ್ಷರು ಆಗಿರುತ್ತಾರೆ.

ಲಯನ್ಸ್ ಕ್ಲಬ್ ಕಾಟಿಪಳ್ಳ- ಕ್ರಷ್ಣಪುರ ಇದರ ಮಾಜಿ ಅಧ್ಯಕ್ಷರು. ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಕೆಲಸ ಮಾಡಿದ್ದಾರೆ.ಕನ್ನಡ ಸಾಹಿತ್ಯ ಪರಿಷತ್, ಬೆಂಗಳೂರು ಇದರ ಸದಸ್ಯರೂ ಹೌದು.


ಶ್ರೀ ಶಾರದಾ ಯಕ್ಷಗಾನ ಮಂಡಳಿ, ಪೆರ್ಮುದೆ ಇದರ ಉಪಾಧ್ಯಕ್ಷರಾಗಿ ಅತ್ಯುತ್ತಮ ಕಾರ್ಯ ನಡೆಸುತ್ತಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಜನಪದ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ಶ್ರೀ ಶಾರದಾ ಕಲಾ ಪ್ರಕಾಶನ(ರಿ.)ದ ಅಧ್ಯಕ್ಷರು ಸಂಸ್ಥಾಪಕರು. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top