ಉಡುಪಿ: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂಡು ಅಲೆವೂರು ಕರ್ವಾಲು ಇದರ ವಿದ್ಯಾರ್ಥಿಗಳಿಗೆ ಶ್ರೀ ವಿಷ್ಣು ಸ್ನೇಹ ಬಳಗ ವತಿಯಿಂದ ಶಾಲೆಯ ದತ್ತು ಸ್ವೀಕಾರ ಯೋಜನೆ ಅಂಗವಾಗಿ ದಾನಿಗಳ ನೆರವಿನಿಂದ ಶಾಲಾ ಬ್ಯಾಗ್, ಕೊಡೆ ಮತ್ತು ಕಲಿಕಾ ಸಾಮಾಗ್ರಿಗಳನ್ನು ಹಸ್ತಾಂತರಿಸಲಾಯಿತು.
ಜೂನ್ 24 ರಂದು ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಷ್ಣು ಸ್ನೇಹ ಬಳಗ ಅಧ್ಯಕ್ಷ ಮತ್ತು ಅಲೆವೂರು ಗ್ರಾ.ಪಂ ಮಾಜಿ ಅಧ್ಯಕ್ಷ ಶ್ರೀಕಾಂತ ನಾಯಕ್, ಕಳೆದ ಹಲವಾರು ವರ್ಷಗಳಿಂದ ಶಾಲೆಯನ್ನು ದತ್ತು ಸ್ವೀಕಾರ ಮಾಡಿ ಮುಚ್ಚುವ ಶಾಲೆಯನ್ನು ಅಭಿವೃದ್ಧಿ ಪಡಿಸಲಾಗಿದೆ. ಗ್ರಾಮದಲ್ಲಿ ಶಾಲೆ ಮತ್ತು ದೇವಾಲಯ ಪ್ರಮುಖವಾಗಿವೆ. ವಿದ್ಯಾರ್ಥಿಗಳು ಉತ್ತಮವಾಗಿ ಅಧ್ಯಯನ ಮಾಡಿ ಶಾಲೆಗೆ ಕೀರ್ತಿ ತರುವ ಕೆಲಸ ಮಾಡಬೇಕು ಎಂದರು.
ಶಾಲಾ ಹಳೆ ವಿದ್ಯಾಥಿ೯ ಲೇಖಕ ರಾಘವೇಂದ್ರ ಪ್ರಭು ಕರ್ವಾಲು ಮಾತನಾಡಿ, ವಿದ್ಯಾರ್ಥಿಗಳು ಶಾಲೆಯಲ್ಲಿ ಸಿಗುವ ಎಲ್ಲಾ ಸೌಲಭ್ಯಗಳನ್ನು ಉತ್ತಮವಾಗಿ ಬಳಕೆ ಮಾಡಿಕೊಂಡು ಮುಂದೆ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾದಾಗ ಶಾಲೆಗೆ ಸಹಾಯ ಹಸ್ತ ನೀಡುವರಂತಾಗಬೇಕು.
ನಮ್ಮ ಸಮಾಜದಲ್ಲಿ ಅದೆಷ್ಟು ಯುವಕ ಯುವತಿ ಮಂಡಲಗಳು ಕೇವಲ ವಾರ್ಷಿಕೋತ್ಸವಕ್ಕೆ ಮಾತ್ರ ಸೀಮಿತವಾಗಿವೆ. ಆದರೆ ವಿಷ್ಣು ಸ್ನೇಹ ಬಳಗ ಕಳೆದ ಹತ್ತಾರು ವರ್ಷಗಳಿಂದ ನಿರಂತರವಾಗಿ ಶಾಲೆಯನ್ನು ಉಳಿಸಿ ಬೆಳೆಸುವ ಅಪೂರ್ವವಾದ ಕೆಲಸ ಮಾಡುತ್ತಿವೆ ಇದು ಮಾದರಿಯಾದ ಕಾರ್ಯ ಎಂದರು.
ವಿದ್ಯಾಭಿಮಾನಿ ರಾಮಚಂದ್ರ ನಾಯಕ್ ಶುಭ ಹಾರೈಸಿದರು. ವೇದಿಕೆಯಲ್ಲಿ ಹಳೆ ವಿದ್ಯಾರ್ಥಿಗಳಾದ ಸಂಪತ್, ಕೇಶವ ಆಚಾರ್ಯ, ಸುರೇಶ್ ನಾಯಕ್, ರಾಘವೇಂದ್ರ ಆಚಾರ್ಯ, ವಿಘ್ನೇಶ್ ನಾಯಕ್ ಮುಂತಾದವರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಸವಿತಾ ಶಾಲೆಯ ಬೆಳವಣಿಗೆಗೆ ಎಲ್ಲಾ ಪೋಷಕರು ಸಹಕರಿಸುವಂತೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಧನಸಹಾಯ ಮಾಡಿದ ಎಲ್ಲ ದಾನಿಗಳಿಗೆ ಧನ್ಯವಾದ ಸಮರ್ಪಿಸಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ