ಡಾ. ಇಂದಿರಾ ಹೆಗ್ಗಡೆಗೆ ಮಾನವಿಕ ಅಧ್ಯಯನ ಪ್ರಶಸ್ತಿ ಪ್ರದಾನ

Upayuktha
0


ಸುರತ್ಕಲ್‌: ಕನ್ನಡ ನಾಡು, ನುಡಿ, ಸಂಸ್ಕೃತಿ, ಇತಿಹಾಸ, ಮಾನವಿಕ ವಿಷಯಗಳಿಗೆ ಕುರಿತು ನಡೆಸುವ ಸಂಶೋಧನ ಕ್ಷೇತ್ರದ ಅನನ್ಯ ಸಾಧನೆಗೆ ಕನ್ನಡ ಪುಸ್ತಕ ಪ್ರಾಧಿಕಾರ ಕೊಡ ಮಾಡುವ ಡಾ. ಎಂ.ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ 2023 ಗೆ ಹಿರಿಯ ಸಾಹಿತಿ ಹಾಗೂ ಸಂಶೋಧಕಿ ಡಾ. ಇಂದಿರಾ ಹೆಗ್ಗಡೆ ಆಯ್ಕೆಯಾಗಿದ್ದು ಪ್ರಶಸ್ತಿಯನ್ನು ಜೂ.4 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರಿಂದ ಸ್ವೀಕರಿಸಿದರು.


ಹಿರಿಯ ಸಾಹಿತಿ ಪ್ರೊ. ಅರವಿಂದ ಮಾಲಗತ್ತಿ, ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಮತ್ತಿತರರು ಉಪಸ್ಥತರಿದ್ದರು.


ಕನ್ನಡ ಮತ್ತು ತುಳು ನಾಡು ನುಡಿ ಸಂಸ್ಕೃತಿ ಇತಿಹಾಸ ಜನಪದ ಲೋಕಕ್ಕೆ ತಮ್ಮ ಮೌಲಿಕ ಸಂಶೋಧನಾ ಮತ್ತು ಸೃಜನಶೀಲ ಕೃತಿಗಳನ್ನು ಕೊಡುಗೆಯಾಗಿ ನೀಡಿರುತ್ತಾರೆ. ಎಸ್.ಆರ್. ಹೆಗ್ಡೆ ಚಾರಿಟಬಲ್ ಟ್ರಸ್ಟ್ ಮೂಲಕ ಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು, ಗ್ರಂಥಾಲಯಗಳಿಗೆ ಪುಸ್ತಕ ಕೊಡುಗೆ, ಕೃತಿ ಪ್ರಕಟಣೆ ಮತ್ತು ಸಂಘಟನಾ ಕಾರ್ಯಗಳಲ್ಲಿ ತೊಡಗಿಸಿ ಕೊಂಡಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top