ಡಾ. ಪುರುಷೋತ್ತಮ್ ಬಿಳಿಮಲೆಯವರಿಗೆ ಕನ್ನಡ ಪಯಸ್ವಿನಿ ಪ್ರಶಸ್ತಿ

Chandrashekhara Kulamarva
0

ಕಾಸರಗೋಡು: ಕರ್ನಾಟಕ ಸರಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತಮ ಬಿಳಿಮಲೆ ಯವರೀಗೆ, ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನದ ಪ್ರತಿಷ್ಠಿತ ಅಂತಾರಾಜ್ಯ ಪ್ರಶಸ್ತಿಯಾದ "ಕನ್ನಡ ಪಯಸ್ವಿನಿ ಪ್ರಶಸ್ತಿ "ನೀಡಿ ಪುರಸ್ಕಾರಿಸಲಾಯಿತು. ಕನ್ನಡ ಭವನದ ರೂವಾರಿಗಳಾದ ಡಾ. ವಾಮನ್ ರಾವ್ ಬೇಕಲ್ -ಸಂಧ್ಯಾ ರಾಣಿ ದಂಪತಿಗಳು ಪ್ರಶಸ್ತಿ ಪ್ರದಾನ ಮಾಡಿದರು.


ಕಾಸರಗೋಡಿನ ಏತಡ್ಕ ನಾರಾಯಣ ಅಲೆವೂರಾಯರ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ಕರ್ನಾಟಕ ಸರಕಾರದ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಎ. ಆರ್. ಸುಬ್ಬಯ್ಯಕಟ್ಟೆ ಅಧ್ಯಕ್ಷತೆ ವಹಿಸಿದರು. ಪ್ರೊ. ಎ ಶ್ರೀನಾಥ್ ಬಿಳಿಮಲೆಯವರ ವ್ಯಕ್ತಿ ಸಾಧನೆ ಪರಿಚಯ ನೀಡಿದರು. ಮುಖ್ಯ ಅತಿಥಿಯಾಗಿ ಡಾ. ನವೀನ್ ಕುಳಮರ್ವ, ಪತ್ರಕರ್ತ ಪುರುಷೋತ್ತಮ್ ಭಟ್, ಪತ್ರಕರ್ತ ಪುರುಷೋತ್ತಮ ಪೆರ್ಲ, ಮಾತನಾಡಿದರು.


ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ ಉಪಾಧ್ಯಕ್ಷ ನರಸಿಂಹ ಭಟ್ ಏತಡ್ಕ ಶಾಲು ಹೊದಿಸಿ, ಪ್ರೊ. ಎ ಶ್ರೀನಾಥ್ ಹಾರ ತೊಡಿಸಿ ಸಂದ್ಯಾ ರಾಣಿ ಟೀಚರ್ ಸ್ಮರಣಿಕೆ ನೀಡಿ, ವಾಮನ್ ರಾವ್ ಬೇಕಲ್ ಪಯಸ್ವಿನಿ ಪ್ರಶಸ್ತಿ ನೀಡಿ ಗೌರವಿಸಿದರು.


ಕಾಸರಗೋಡು ಪ್ರದೇಶದ ಕನ್ನಡಿಗರ ಅತಿಥ್ಯ, ಗೌರವ ಭಾವಕ್ಕೆ ಶರಣು, ಇಲ್ಲಿಯವರು ತೋರುವ ಪ್ರೀತಿ, ಆದರಗಳು ಆದರಣೀಯ, ಕಾಸರಗೋಡು ಕನ್ನಡಿಗರು ಅನುಭವಿಸುತ್ತಿರುವ ಕನ್ನಡಪರ ಸಂಕಷ್ಟಗಳ ಬಗ್ಗೆ ಪೂರ್ಣ ಅರಿವಿದ್ದ ನಾನು ಪ್ರಾಧಿಕಾರದ ಸೀಮಿತ ಪರಿಧಿಗೂ ಮೀರಿ ಸಹಾಯ ಸಹಕಾರಗಳನ್ನು ಮಾಡುವ ಭರವಸೆ ನೀಡಿದರು. ವಾಮನ್ ರಾವ್ ಬೇಕಲ್ ಸ್ವಾಗತಿಸಿ, ಪುರುಷೋತ್ತಮ್ ಭಟ್ ಕಾರ್ಯಕ್ರಮ ನಿರ್ವಹಿಸಿ, ಭವನ ಕಾರ್ಯದರ್ಶಿ ವಸಂತ್ ಕೆರೆಮನೆ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top