ವಿದ್ಯಾಸಂಸ್ಥೆಗಳು ಮೌಲ್ಯಾಧಾರಿತ ಶಿಕ್ಷಣ ನೀಡಬೇಕು: ಕಸ್ತೂರಿ ಪಿ.

Upayuktha
0


ಸುರತ್ಕಲ್: ಪ್ರಾಥಮಿಕ ಶಾಲಾ ಶಿಕ್ಷಣದ ಹಂತದಲ್ಲಿಯೇ ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವ ಹವ್ಯಾಸವನ್ನು ಮೂಡಿಸಿಕೊಳ್ಳಬೇಕು. ಬದುಕಿನ ಉನ್ನತಿಗೆ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣವನ್ನು ವಿದ್ಯಾಸಂಸ್ಥೆಗಳು ನೀಡಬೇಕೆಂದು ಇಡ್ಯಾ ವಿದ್ಯಾದಾಯಿನೀ ಹಿರಿಯ ಪ್ರಾಥಮಿಕ ಶಾಲೆಯ ಸಂಚಾಲಕಿ ಕಸ್ತೂರಿ ಪಿ. ನುಡಿದರು.


ಅವರು ಸುರತ್ಕಲ್ ಹಿಂದು ವಿದ್ಯಾದಾಯಿನೀ ಸಂಘದ ಆಡಳಿತಕ್ಕೆ ಒಳಪಟ್ಟ ಇಡ್ಯಾ ವಿದ್ಯಾದಾಯಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಶಾಲಾ ಆರಂಭ ಉತ್ಸವದ ಸಂದರ್ಭದಲ್ಲಿ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ ಸ್ವೀಕಾರ ಮತ್ತು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.


ಸಮಾರಂಭ ಉದ್ಘಾಟಿಸಿ ಮಾತನಾಡಿದ ಗೋವಿಂದ ದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೃಷ್ಣಮೂರ್ತಿ. ಪಿ. ಅವರು 109 ವರ್ಷಗಳ ಭವ್ಯ ಪರಂಪರೆ ಹೊಂದಿರುವ ವಿದ್ಯಾದಾಯಿನೀ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ವಿಶಿಷ್ಟ ಕೊಡುಗೆ ನೀಡಿದೆ. ಪುಸ್ತಕ ಪ್ರೀತಿ ಬೆಳೆಸುವ ನಿಟ್ಟಿನಲ್ಲಿ ಗ್ರಂಥಾಲಯ ಮಹತ್ವದ ಪಾತ್ರ ವಹಿಸುತ್ತದೆ ಎಂದು ನುಡಿದರು. ಅವರು ಶಾಲಾ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.


ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ವಿದ್ಯಾದಾಯಿನೀ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿನಯ ಆಚಾರ್ ವಿದ್ಯಾರ್ಥಿಗಳ ಬೆಳವಣಿಗೆಗೆ ವಿವಿಧ ಚಟುವಟಿಕೆಗಳನ್ನು ಅಳವಡಿಸಿ ಸಮಗ್ರ ಬೆಳವಣಿಗೆಗೆ ಪೂರಕ ವಾತಾವರಣ ಕಲ್ಪಿಸಿ ಕೊಡಲಾಗುತ್ತದೆ ಎಂದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ನಮಿತಾ ಶ್ರೀನಾಥ್ ಶುಭ ಹಾರೈಸಿದರು.


ರಾಮಪ್ರಸಾದ್ ಬೆಂಗಳೂರು ಕೊಡ ಮಾಡಿರುವ ಪುಸ್ತಕಗಳನ್ನು ಎಲ್ಲಾ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಮುಖ್ಯ ಶಿಕ್ಷಕಿ ಶಾಂತ ಸ್ವಾಗತಿಸಿದರು. ಶಿಕ್ಷಕ, ಶಿಕ್ಷಕಿಯರು ಮತ್ತು ಪೋಷಕರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top