ಮಂಗಳೂರು: ಅಂತರಾಷ್ಟ್ರೀಯ ವೈದ್ಯರ ದಿನದ ಅಂಗವಾಗಿ, ಶ್ರೀನಿವಾಸ ಪೋರ್ಟ್ ಆಸ್ಪತ್ರೆ, SIMSRC ನ ಸಹಯೋಗದೊಂದಿಗೆಜುಲೈ 1, 2025ರಂದು ತನ್ನ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಪಣಂಬೂರಿನ ಶ್ರೀನಿವಾಸ ಪೋರ್ಟ್ ಆಸ್ಪತ್ರೆ ಆವರಣದಲ್ಲಿ ಆಯೋಜಿಸಲು ನಿರ್ಧರಿಸಿದೆ. ಈ ಶಿಬಿರವು ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ನಡೆಯಲಿದ್ದು, ಸಾರ್ವಜನಿಕರಿಗೆ ಮುಕ್ತವಾಗಿ ಲಭ್ಯವಿರಲಿದೆ.
ವೈದ್ಯರ ನಿಸ್ವಾರ್ಥ ಸೇವೆಗೆ ಗೌರವ ಸಲ್ಲಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಿಬಿರದ ವೇಳೆ ಬಿಪಿ ಮತ್ತು ಶುಗರ್ ತಪಾಸಣೆ, ಇಸಿಜಿ ಮತ್ತು ವೈದ್ಯರ ಸಲಹೆಗಳನ್ನು ಉಚಿತವಾಗಿ ನೀಡಲಾಗುವುದು.
ಈ ಶಿಬಿರದ ಮೂಲಕ ಮುನ್ನೆಚ್ಚರಿಕೆಯ ಆರೋಗ್ಯ ತಪಾಸಣೆಯ ಮಹತ್ವವನ್ನು ಬೋಧಿಸಲಾಗುವುದು ಹಾಗೂ ಸಮುದಾಯದ ಆರೋಗ್ಯದತ್ತ ಆಸ್ಪತ್ರೆಗೆ ಇರುವ ಬದ್ಧತೆಯನ್ನು ಪ್ರದರ್ಶಿಸಲಾಗುವುದು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ