ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ

Upayuktha
0


ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ  ಮಹಾವಿದ್ಯಾಲಯ (ಸ್ವಾಯತ್ತ) ಇದರ ವಿವೇಕಾನಂದ ಅಧ್ಯಯನ ಕೇಂದ್ರ 'ಯಶಸ್' ಇದರ ಮೂಲಕ ವಿದ್ಯಾರ್ಥಿಗಳಿಗೆ‌ ಐಎಎಸ್, ಐಪಿಎಸ್, ಕೆಎಎಸ್ ಪರೀಕ್ಷೆಗಳ ತರಬೇತಿ ಉಚಿತವಾಗಿ ನೀಡುತ್ತಿದೆ. ಈ ಮೂಲಕ ಪ್ರಥಮ ವರ್ಷದ ಪದವಿಗೆ ದಾಖಲಾತಿ ಪಡೆಯುವ ವಿದ್ಯಾರ್ಥಿಗಳು ಈ ಸುವರ್ಣಾವಕಾಶವನ್ನು ಬಳಸಿಕೊಳ್ಳಬಹುದು. ಯಶಸ್ ಘಟಕವು ವಿವೇಕಾನಂದ ವಿದ್ಯಾವರ್ಧಕ ಸಂಘದ ವಿದ್ಯಾರ್ಥಿ ಪರ ಚಟುವಟಿಕೆಗಳಲ್ಲಿ ಒಂದಾಗಿದೆ. ಇಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಾಗರಿಕ ಸೇವಾ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಲು ವಿಶೇಷ ಉಚಿತ ತರಬೇತಿಯನ್ನು ನುರಿತ ತರಬೇತುದಾರರಿಂದ ನೀಡಲಾಗುವುದು.


ಆಸಕ್ತ ವಿದ್ಯಾರ್ಥಿಗಳು, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ಈ ಸದುಪಯೋಗವನ್ನು ಪಡೆದುಕೊಳ್ಳಬಹುದು. ಭವಿಷ್ಯದಲ್ಲಿ ಯುಪಿಎಸ್‌ಸಿ ಪರೀಕ್ಷೆ ಬರೆಯುವ ಗುರಿ ಹೊಂದಿರುವ ವಿದ್ಯಾರ್ಥಿಗಳಿಗೆ ಇದೊಂದು ಸುವರ್ಣ ಅವಕಾಶ.


ಆಸಕ್ತ ವಿದ್ಯಾರ್ಥಿಗಳು ಸಂಬಂಧಪಟ್ಟ ದಾಖಲೆಗಳನ್ನು ಪ್ರವೇಶಾತಿ ಪಡೆಯುವ ಸಂದರ್ಭದಲ್ಲಿ ಕಾಲೇಜಿಗೆ ನೀಡಬೇಕಾಗುತ್ತದೆ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ 08251-298599, 9901852117 ಸಂಪರ್ಕಿಸಬಹುದಾಗಿದೆ ಎಂದು ಕಾಲೇಜಿನ ಆಡಳಿತ ಮಂಡಳಿಯ ತೀರ್ಮಾನವನ್ನು ಪ್ರಾಂಶುಪಾಲ ಡಾ. ಶ್ರೀಧರ ನಾಯಕ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top