ಟೀಸರ್ ನಲ್ಲೇ ಕ್ರಿಕೆಟ್ ಪ್ರೇಮಿಗಳನ್ನು ತನ್ನತ್ತ ಸೆಳೆದ ಗಜಾನನ ಕ್ರಿಕೆಟರ್ಸ್

Upayuktha
0

 



ಮಂಗಳೂರು: ಭಾರತದಲ್ಲಿ ಕ್ರಿಕೆಟ್ ಅಂದರೆ ಎಲ್ಲಿಲ್ಲದ ಪ್ರೀತಿ. ಅದರಲ್ಲೂ ಕರಾವಳಿಯಲ್ಲಿ ಅಂಡರ್ ಆರ್ಮ್ ಕ್ರಿಕೆಟ್ ಎಂದರೆ ಒಂದು ಆರಾಧನೆಯಾಗಿದೆ. ಅದೇ ಅಂಡರ್ ಆರ್ಮ್ ಕ್ರಿಕೆಟ್ ನ ಕಥೆ ತುಳು ಸಿನಿಮಾದಲ್ಲಿ ಬರುತ್ತಿದೆ ಎಂದರೆ ಅಭಿಮಾನಿಗಳಿಗೆ ಒಂದು ಹಬ್ಬ. ಹೌದು  ಭಾರತದಲ್ಲಿ ಪ್ರಪ್ರಥಮ ಬಾರಿಗೆ ಅಂಡರ್ ಆರ್ಮ್ ಕ್ರಿಕೆಟ್ ಕಥೆಯನ್ನು ಗಜಾನನ ಕ್ರಿಕೆಟರ್ಸ್ ಸಿನಿಮಾದ ಮೂಲಕ ತೆರೆದಿಡಲಾಗಿದೆ.


ಈ ಚಿತ್ರದ ಮೊದಲ ನೋಟ ಬಿಡುಗಡೆಯಾಗಿದ್ದು ಚಿತ್ರ ಪ್ರೇಮಿಗಳೆಲ್ಲ ಹುಬ್ಬೇರಿಸಿ ನೋಡುತ್ತಿದ್ದಾರೆ. ಈ ಚಿತ್ರದ ತಾರಾಗಣದಲ್ಲಿ ವಿನೀತ್ ಕುಮಾರ್, ಅನ್ವಿತಾ ಸಾಗರ್, ಸಮತಾ ಅಮೀನ್, ಪ್ರಜ್ವಲ್ ಶೆಟ್ಟಿ, ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಬೋಜರಾಜ್ ವಾಮಂಜೂರ್, ಪ್ರಕಾಶ್ ತುಮಿನಾಡ್, ದೀಪಕ್ ರೈ, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್, ವಾಳ್ತಾರ್ ನಂದಳಿಕೆ, ಸಚಿನ್ ಮಾಡ ಸೇರಿದಂತೆ ಕರಾವಳಿಯ ಹಾಲವಾರು ಹೆಸರಾಂತ ಕಲಾವಿದರು ನಟಿಸಿದ್ದಾರೆ.


ಇದರಿಂದ ಈ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಾಗಿದ್ದು ಆದಷ್ಟು ಬೇಗ ಚಿತ್ರಮಂದಿರದಲ್ಲಿ ಸಿನಿಮಾ ಬಿಡುಗಡೆ ಮಾಡುವ ತಯಾರಿ ನಡೆಯುತ್ತಿದೆ. ಈ ಚಿತ್ರ ಪ್ರಜ್ವಲ್ ಫಿಲಂಸ್ ಬ್ಯಾನರ್ ನಲ್ಲಿ ತಯಾರಾಗಿದ್ದು ಪ್ರಜ್ವಲ್ ಶೆಟ್ಟಿ ಇವರು ನಿರ್ಮಾಣ ಮಾಡಿ ರೋಹನ್ ವಾಮಂಜೂರ್ ಹಾಗೂ ಸಂತೋಷ್ ಲಾಡ್ ಸಹ ನಿರ್ಮಾಪಕರಾಗಿದ್ದಾರೆ.


ಚಿತ್ರಕ್ಕೆ ಕೀರ್ತನ್ ಭಂಡಾರಿ ಆಕ್ಷನ್ ಕಟ್ ಹೇಳಿದ್ದಾರೆ. ಪ್ರಸನ್ನ ಶೆಟ್ಟಿ ಬೈಲೂರು ಸಂಭಾಷಣೆ ಬರೆದಿದ್ದು, ಮಿನುತ್ ಕೆ ಸುವರ್ಣ ಛಾಯಾಗ್ರಹಣ, ಸೃಜನ್ ಕುಮಾರ್ ಸಂಗೀತ, ಸುಜಯ್ ಶಿವರಾಮ್, ಕೌಶಿಕ್ ಭಂಡಾರಿ ಸಂಕಲನ ಈ ಸಿನಿಮಾಕ್ಕೆ ಇದೆ. ಈ ಸಿನಿಮಾ ವಿಭಿನ್ನವಾಗಿ ಮೂಡಿ ಬಂದಿದ್ದು ಸಿನಿಪ್ರಿಯರು ಹಾಗೂ ಕ್ರಿಕೆಟ್ ಪ್ರೇಮಿಗಳು ಚಿತ್ರ ಬಿಡುಗಡೆಗೆ ಕಾತುರರಾಗಿ ಕಾಯುತ್ತಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top