ಮಂಗಳೂರು: ರಾಮಕೃಷ್ಣ ಮಿಷನ್, ಮಂಗಳೂರು ಹಾಗೂ ಸಮತಾ (ರಿ) ಮಹಿಳಾ ಬಳಗದ ಸಂಯುಕ್ತ ಆಶ್ರಯದಲ್ಲಿ "ಇಗ್ನೈಟಿಂಗ್ ದಿ ಫ್ಯೂಚರ್ – ಇಸ್ರೋಸ್ ಲೆಗಸಿ ಆಂಡ್ ಬಿಯಾಂಡ್"ಎಂಬ ಶೀರ್ಷಿಕೆಯಡಿಯಲ್ಲಿ ವಿಶೇಷ ಸಂವಾದ ಕಾರ್ಯಕ್ರಮವನ್ನು ಜೂನ್ 22ರಂದು ರಾಮಕೃಷ್ಣ ಮಠದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪದ್ಮಶ್ರೀ ಡಾ. ಎ.ಎಸ್. ಕಿರಣ್ ಕುಮಾರ್, ಇಸ್ರೋದ ಮಾಜಿ ಅಧ್ಯಕ್ಷರು ವಿಶೇಷ ಅತಿಥಿಯಾಗಿ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಜಿತಾಕಾಮಾನಂದಜೀ ಮಹಾರಾಜರುಮುಖ್ಯ ಅತಿಥಿಯಾಗಿ ಭಾಗವಹಿಸಿ ಸಭೆಗೆ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ವಿಜಯಲಕ್ಷ್ಮೀ ಆರ್. ರಾವ್, ಶ್ರೀನಿವಾಸ ವಿಶ್ವವಿದ್ಯಾಲಯದ ಬೋರ್ಡ್ ಆಫ್ ಗವರ್ನರ್ಸ್ ಸದಸ್ಯೆ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಪ್ರೇರಣೆಯ ಸಂದೇಶ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು, ಶಿಕ್ಷಣತಜ್ಞರು, ಸಮತಾ ಮಹಿಳಾ ಬಳಗದ ಸದಸ್ಯರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಯುವಜನತೆಯ ಆಸಕ್ತಿ ಹಾಗೂ ಜ್ಞಾನವನ್ನು ಉತ್ತೇಜಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಂತ್ಯದಲ್ಲಿ ಪದ್ಮಶ್ರೀ ಡಾ. ಎ.ಎಸ್. ಕಿರಣ್ ಕುಮಾರ್ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ