ಇಂದ್ರಾಳಿ ಆಂಗ್ಲ ಮಾಧ್ಯಮ ಹೈಸ್ಕೂಲು: ಶಾಲಾ ಸಂಸತ್ತು ಉದ್ಘಾಟನೆ

Chandrashekhara Kulamarva
0


ಉಡುಪಿ: ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಹೆತ್ತವರು ಮತ್ತು ಶಿಕ್ಷಕರು ಹೆಚ್ಚಿನ ಉತ್ತೇಜನ ನೀಡಬೇಕಾಗಿದೆ. ಜಾಗತೀಕರಣದ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಗಳಿಸುವಲ್ಲಿ ಇಚ್ಛಾ ಶಕ್ತಿ, ಕೌಶಲ ಶಕ್ತಿ ಸಂವಹನ ಶಕ್ತಿ ವೃದ್ಧಿಸುವಲ್ಲಿ ಇಂತಹ ಪಠ್ಯೇತರ ಚಟುವಟಿಕೆಗಳು ಹೆಚ್ಚಿನ ಮಹತ್ವಿಕೆ ಪಡೆದುಕೊಳ್ಳುತ್ತದೆ ಎಂದು ಎಂಜಿಎಂ ಕಾಲೇಜಿನ ನಿವೃತ್ತ ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಹೇಳಿದರು.


"ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವ ಸಂಸದೀಯ ವ್ಯವಸ್ಥೆ ಸಂವಿಧಾನದ ಆಶಯಗಳ ಕುರಿತಾಗಿ ಅರಿವು ಮೂಡಿಸುವುದು ಇಂದಿನ ಅನಿವಾರ್ಯತೆ" ಎಂದು ಅವರು ನುಡಿದರು. ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿ ಸಂಸತ್ತು ಉದ್ಘಾಟಿಸಿ ಅವರು ಮಾತನಾಡಿದರು.


ಶಾಲಾ ಸಂಚಾಲಕ ಕೆ.ಅಣ್ಣಪ್ಪ ಶೆಣೈ ಸಭಾಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾ ಆಡಳಿತ ಮಂಡಳಿ ಸದಸ್ಯ ಕೆ.ರತ್ನಾಕರ ಶೆಣೈ, ವಿದ್ಯಾ ಅಮರ ಪೈ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಆತ್ರಾಡಿ ದಿನೇಶ್ ಹೆಗ್ಡೆ, ಉಪಾಧ್ಯಕ್ಷ ಶಶಿಧರ ಕುಂದರ್ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಶಾಲಾ ಮುಖ್ಯೇೂಪಾಧ್ಯಾಯ ಕೆ.ವಿನಾಯಕ ಕಿಣಿ ಪ್ರತಿಜ್ಞಾ ವಿಧಿ ಬೇೂಧಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top