ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಆಳ್ವಾಸ್ ಯೋಗಪಟುಗಳಿಗೆ 8 ಚಿನ್ನ

Chandrashekhara Kulamarva
0


ಮೂಡುಬಿದಿರೆ:  ಇತ್ತೀಚೆಗೆ ವಿಯೆಟ್ನಾಂನಲ್ಲಿ ಜರುಗಿದ ಎರಡನೇ ಅಂತರಾಷ್ಟ್ರೀಯ ಯೋಗಾಸನ ಚಾಂಪಿಯನ್‌ಶಿಪ್ ನಲ್ಲಿ ಆಳ್ವಾಸ್ ವಿದ್ಯಾಸಂಸ್ಥೆಯ 8 ಯೋಗಪಟುಗಳು ಭಾರತ ದೇಶವನ್ನು ಪ್ರತಿನಿಧಿಸಿ 8 ಚಿನ್ನದ ಪದಕವನ್ನು ಜಯಿಸುವುದರ  ಜೊತೆಗೆ ವೈಯಕ್ತಿಕ ವಿಭಾಗದಲ್ಲಿ 8 ಅಂತರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿಯನ್ನು ಪಡೆದು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡರು.


ಸಬ್‌ ಜ್ಯೂನಿಯರ್ ವಿಭಾಗದಲ್ಲಿ ಯಶಿಕ ಹಾಗೂ ಚಂದನ - ತಾಳಬದ್ದ ಯೋಗಾಸನದಲ್ಲಿ ಚಿನ್ನ, ಕೋಮಲ - ಕಲಾತ್ಮಕ ಯೋಗಾಸನದಲ್ಲಿ ಚಿನ್ನದ ಪದಕ ಪಡೆದರು. ಜ್ಯೂನಿಯರ್ ಹುಡುಗರ ವಿಭಾಗದಲ್ಲಿ ಪ್ರಜ್ವಲ್ - ಕಲಾತ್ಮಕ ಯೋಗಾಸನ ಹಾಗೂ ಪೃಥ್ವಿಚಾರ್ - ಸಂಪ್ರದಾಯಿಕ ಯೋಗಾಸನದಲ್ಲಿ ಚಿನ್ನದ ಪದಕ ಪಡೆದರು. ಜ್ಯೂನಿಯರ್ ಹುಡುಗಿಯರ ವಿಭಾಗದಲ್ಲಿ ಹಿಮಜ - ಸಂಪ್ರದಾಯಿಕ ಯೋಗಾಸನ ಹಾಗೂ ಅನನ್ಯ ಗುರವ್ - ಕಲಾತ್ಮಕ ಯೋಗಾಸನದಲ್ಲಿ ಚಿನ್ನ, ಸೀನಿಯರ್ ಹುಡುಗಿಯರ ವಿಭಾಗದಲ್ಲಿ ನಿರ್ಮಲ ಸುಭಾಷ್ ಕೊಡ್ಲಿಕರ್ - ಸಂಪ್ರದಾಯಿಕ ಯೋಗಾಸನದಲ್ಲಿ ಚಿನ್ನದ ಪದಕ ಪಡೆಯುವುದರ ಮೂಲಕ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದರು.  ಪದಕ ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top