ಅಡ್ಯನಡ್ಕ ಜನತಾ ಪ್ರೌಢಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Upayuktha
0


ಅಡ್ಯನಡ್ಕ: ಇಲ್ಲಿನ ಜನತಾ ಪ್ರೌಢಶಾಲೆಯಲ್ಲಿ  ಇಂದು (ಜೂ.21) ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ಮುಖ್ಯೋಪಾಧ್ಯಾಯರಾದ ಟಿ. ಆರ್. ನಾಯ್ಕ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.


ಕನ್ನಡ ಅಧ್ಯಾಪಕರು ಹಾಗೂ ಆಯುಷ್ ಇಲಾಖೆಯ ಪ್ರಮಾಣಿಕೃತ ಯೋಗ ತರಬೇತುದಾರ ಶಿವಕುಮಾರ್ ಸಾಯ ಅವರು ವಿದ್ಯಾರ್ಥಿಗಳಿಗೆ ಯೋಗಾಸನದ ಪ್ರಯೋಜನಗಳ ಬಗ್ಗೆ ಮಾಹಿತಿ- ಮಾರ್ಗದರ್ಶನ ನೀಡಿದರು. ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತು. ಎಲ್ಲಾ ಶಿಕ್ಷಕರು ಕಾರ್ಯಕ್ರಮ ಸಂಘಟನೆಯಲ್ಲಿ ಸಹಕರಿಸಿದರು.


Post a Comment

0 Comments
Post a Comment (0)
To Top