ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಯೋಗ ಶಿಬಿರ

Upayuktha
0

ಅಂತಾರಾಷ್ಟ್ರೀಯ ಯೋಗ ದಿನಾಚರಣೆ 




ಉಜಿರೆ: 11ನೇ ವಿಶ್ವ ಯೋಗ ದಿನದ ಪ್ರಯುಕ್ತ ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ವತಿಯಿಂದ ಯೋಗ ಶಿಬಿರವನ್ನು ಆಯೋಜಿಸಲಾಗಿತ್ತು. ಶಿಬಿರವನ್ನು ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಹರ್ಷಿಣಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು "ಯೋಗ ಮನಸ್ಸನ್ನು ಹತೋಟಿಯಲ್ಲಿ ಇಡಲು ಸಹಕಾರಿ. ಪ್ರತಿ ದಿನ ಯೋಗ ಮಾಡುವುದರಿಂದ ಉತ್ತಮ ಅರೋಗ್ಯ ಕಾಪಾಡಿಕೊಳ್ಳಬಹುದು" ಎಂದು ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಮಾತನಾಡಿ, "ಯೋಗ ಶಿಬಿರದಲ್ಲಿ ಕಲಿತ ಯೋಗ ಜ್ಞಾನವನ್ನು ಬರಿ ಇಲ್ಲಿಗೆ ಸೀಮಿತಗೊಳಿಸದೆ ಮುಂದೆಯೂ ಅಳವಡಿಸಿಕೊಂಡು ಅರೋಗ್ಯವಂತ ಜೀವನ ನಡೆಸುವಂತಾಗಲಿ" ಎಂದು ಹೇಳಿದರು.


ವೇದಿಕೆಯಲ್ಲಿ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಯೋಗ ವೈದ್ಯೆ ಡಾ.ಚೇತನಾ, ಜೀವ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ರೀಮತಿ ಕೋಮಲ್ ಪಿ ಸಿ, ಎನ್ ಎಸ್ ಎಸ್ ಯೋಜನಾಧಿಕಾರಿ ವಿಶ್ವನಾಥ್ ಎಸ್, ಸಹಯೋಜನಾಧಿಕಾರಿ ಶ್ರೀಮತಿ ಶೋಭಾ ಪಿ ಉಪಸ್ಥಿತರಿದ್ದರು. ಸ್ವಯಂ ಸೇವಕಿ ರಾಶಿಕಾ ನಿರೂಪಿಸಿ ನಾಗಲಕ್ಷ್ಮಿ ಸ್ವಾಗತಿಸಿ ಮೌಲ್ಯ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top