ಕಾಲ್ತುಳಿತ ದುರಂತಕ್ಕೆ ರಾಜ್ಯ ಸರಕಾರದ ಬೇಜವಾಬ್ದಾರಿ ಕಾರಣ: ಶಾಸಕ ಕಾಮತ್

Chandrashekhara Kulamarva
0



ಮಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ತಂಡದ ವಿಜಯೋತ್ಸವದ ವೇಳೆ ನಡೆದ ಭೀಕರ ಕಾಲ್ತುಳಿತದಲ್ಲಿ ಮಕ್ಕಳು, ಮಹಿಳೆಯರು, ಪುರುಷರು ಸೇರಿದಂತೆ 11 ಮಂದಿ ಬಲಿಯಾಗಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯಿಂದ ಅಮಾಯಕ ಜೀವಗಳು ಬಲಿಯಾಗಿವೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. 


ಪೊಲೀಸರೇ ವಿಜಯೋತ್ಸವ ಬೇಡ ಎಂದು ಅನುಮತಿ ನಿರಾಕರಿಸಿದ್ದರೂ, ರಾಜ್ಯ ಸರ್ಕಾರವೇ ಹಠಕ್ಕೆ ಬಿದ್ದು ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದೇ ಆತುರವಾಗಿ ಅಭಿನಂದನಾ ಸಮಾರಂಭ ಏರ್ಪಡಿಸಿದ್ದೇ ಈ ಅನಾಹುತಕ್ಕೆ ಕಾರಣ. ತಮ್ಮ ನೆಚ್ಚಿನ ಆಟಗಾರರನ್ನು ನೋಡಲು, ಸಂಭ್ರಮಾಚರಣೆ ಯಲ್ಲಿ ಪಾಲ್ಗೊಳ್ಳಲು ಅತ್ಯಂತ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಾರೆ ಎಂಬ ಕನಿಷ್ಠ ಪರಿಜ್ಞಾನವೂ ಸಮಾರಂಭದಲ್ಲಿ ಭಾಗಿಯಾಗಿದ್ದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಸೇರಿದಂತೆ ಇಡೀ ಸರ್ಕಾರಕ್ಕೆ ಇಲ್ಲದಿದ್ದಿದ್ದು ಬಹು ದೊಡ್ಡ ಬೇಜವಾಬ್ದಾರಿತನವಾಗಿದೆ. ಹಾಗಾಗಿ ಈ ದುರಂತದ ಹೊಣೆಯನ್ನು ಸರ್ಕಾರವೇ ಹೊರಬೇಕು ಎಂದು ಆಗ್ರಹಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top