ಪಣಜಿ: ನಮ್ಮ ಮಕ್ಕಳಿಗೆ ಬಾಲ್ಯದಿಂದಲೇ ಉತ್ತಮ ಶಿಕ್ಷಣ ನೀಡಿ ಸುಶಿಕ್ಷಿತರನ್ನಾಗಿ ಮಾಡಬೇಕು. ಈ ನಿಟ್ಟಿನಲ್ಲಿ ಪಾಲಕರದ್ದು ಹಾಗೂ ಶಾಲೆಯಲ್ಲಿ ಶಿಕ್ಷಕರದ್ದೂ ಜವಾಬ್ದಾರಿ ಹೆಚ್ಚಿದೆ. ನಮ್ಮ ಮುಂದಿನ ಪೀಳಿಗೆ ಒಳ್ಳೆಯದಾಗಿರಬೇಕಾದರೆ ಇಂದು ನಾವು ಅವರಿಗೆ ಉತ್ತಮ ಮಾರ್ಗದರ್ಶನ ಮತ್ತು ಶಿಕ್ಷಣವನ್ನು ನೀಡಬೇಕು ಎಂದು ವಿಜಯಪುರ ಜಿ.ಪಂ ಮಾಜಿ ಅಧ್ಯಕ್ಷೆ ನೀಲಮ್ಮ ಮೇಟಿ ನುಡಿದರು.
ಕರ್ನಾಟಕ ಮಕ್ಕಳ ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯ ಘಟಕವನ್ನು ಗೋವಾದ ಶ್ರೀ ಯಲ್ಲಾಲಿಂಗೇಶ್ವರ ಪ್ರಾಥಮಿಕ ಶಾಲೆಯಲ್ಲಿ ವಿಜಯಪುರ ಜಿಪಂ ಮಾಜಿ ಅಧ್ಯಕ್ಷೆ ನೀಲಮ್ಮ ಮೇಟಿ ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಿದ್ದರು. ಗೋವಾದಲ್ಲಿ ಕನ್ನಡ ಉಳಿಸಿ ಬೆಳೆಸುವಲ್ಲಿ ಕನ್ನಡ ಸಾಹಿತ್ಯ ಪರಿಷತ್ ಉತ್ತಮ ಕಾರ್ಯ ನಿರ್ವಹಿಸುತ್ತಿದೆ. ಗೋವಾದಲ್ಲಿ ಕರ್ನಾಟಕ ಮಕ್ಕಳ ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆಯಾಗಿರುವುದು ಗೋವಾದಲ್ಲಿರುವ ನಮಗೆಲ್ಲ ಸಂತಸದ ಸಂಗತಿ. ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಮಕ್ಕಳ ಸಾಹಿತ್ಯ ಪರಿಷತ್ ಉತ್ತಮ ಕಾರ್ಯ ನಿರ್ವಹಿಸಲಿ ಎಂದು ನೀಲಮ್ಮ ಮೇಟಿ ನುಡಿದರು.
ಬಿಜೆಪಿ ರಾಜ್ಯ ಕಾರ್ಯದರ್ಶಿ ದೀಪಕ್ ನಾಯ್ಕ ಮಾತನಾಡಿ- ಗೋವಾ ರಾಜ್ಯದಲ್ಲಿ ಎಷ್ಟು ಕನ್ನಡ ಮಾಧ್ಯಮ ಶಾಲೆಗಳಿವೆ ಎಂಬುದನ್ನು ತಿಳಿಸಿರಿ, ಕನ್ನಡ ಶಾಲೆಗಳಿಗೆ ಅಗತ್ಯ ಸಹಾಯ ಸಹಕಾರ ನೀಡುತ್ತೇವೆ ಎಂದರು. ಈ ಸಂದರ್ಭದಲ್ಲಿ ಶ್ರೀ ಯಲ್ಲಾಲಿಂಗೇಶ್ವರ ಮಠದ ಅರ್ಚಕರಾದ ಕಂಬಳಯ್ಯ ಮಹಾರಾಜರು, ಕಸಾಪ ಗೋವಾ ರಾಜ್ಯ ಗೌ.ಕಾರ್ಯದರ್ಶಿ ನಾಗರಾಜ ಗೋಂದಕರ್, ಶಾಲಾ ಮುಖ್ಯಾಧ್ಯಾಪಕರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ಶ್ರೀ ಯಲ್ಲಾಲಿಂಗೇಶ್ವರ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಸ್ವಾಗತ ಗೀತೆ ಕಾಡಿದರು. ಈ ಸಂದರ್ಭದಲ್ಲಿ ಮಕ್ಕಳ ಸಾಹಿತ್ಯ ಪರಿಷತ್ ಗೋವಾ ನೂತನ ರಾಜ್ಯಾಧ್ಯಕ್ಷ ಮಹಾಂತೇಶ ಕಾರಿಗೇರಿ ರವರನ್ನು ವಿಜಯಪುರ ಜಿಪಂ ಮಾಜಿ ಅಧ್ಯಕ್ಷೆ ನೀಲಮ್ಮ ಮೇಟಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ