ಕಾರವಾರ: ಭಾರೀ ಮಳೆ ಮುನ್ಸೂಚನೆ: ನಾಳೆ ಶಾಲೆಗಳಿಗೆ ರಜೆ ಘೋಷಣೆ

Upayuktha
0



ಕಾರವಾರ: ಭಾರತೀಯ ಹವಮಾನ ಇಲಾಖೆ (IMD), ಬೆಂಗಳೂರು ರವರು ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನಾಂಕ: 16-06-2025 ರಿಂದ ದಿನಾಂಕ: 17-06-2025 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ (ರೆಡ್ ಅಲರ್ಟ್) ಯನ್ನು ಉಲ್ಲೇಖ (1) ರನ್ವಯ ನೀಡಿರುತ್ತಾರೆ. 


ಉಲ್ಲೇಖ 4 ಮತ್ತು 5 ರಂತೆ ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಹಾಗೂ ಶಿರಸಿ ಸಿದ್ದಾಪುರ, ಯಲ್ಲಾಪುರ ತಾಲ್ಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಮಕ್ಕಳಿಗೆ ಅನಾನುಕೂಲವಾಗದಂತೆ ಹಾಗೂ ಅವಘಡಗಳು ಸಂಭವಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಹಾಗೂ ಶಿರಸಿ ಸಿದ್ದಾಪುರ, ಯಲ್ಲಾಪುರ ತಾಲ್ಲೂಕುಗಳಲ್ಲಿ  ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ದಿನಾಂಕ:17-06-2025 ರಂದು ರಜೆ ಘೋಷಿಸುವ ಬಗ್ಗೆ  ಆದೇಶ ಮಾಡಲಾಗಿದೆ.


ಆದೇಶ: ಈ ಮೇಲಿನ ಪ್ರಸ್ತಾವನೆಯಲ್ಲಿ ವಿವರಿಸಿದ ಕಾರಣಗಳಿಂದ ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34 (ಎಮ್) ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಹಾಗೂ ಶಿರಸಿ ಸಿದ್ದಾಪುರ, ಯಲ್ಲಾಪುರ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ದಿನಾಂಕ:17-06-2025 ರಂದು ರಜೆ ಘೋಷಿಸಿ ಆದೇಶಿಸಲಾಗಿದೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top