ಪೆರ್ನಾಜೆ: ಆರ್ ಪಿ ಕಲಾ ಸೇವಾ ಟ್ರಸ್ಟ್ ಪಾಂಬಾರ್ ಇದರ ವತಿಯಿಂದ ಅಂತರ್ ರಾಜ್ಯ ಮಟ್ಟದ ಗಾನ ಶಾರದೆ ಗಾಯನ ಸ್ಪರ್ಧೆ ಸೀಸನ್ 04 ಗ್ರಾಂಡ್ ಫಿನಾಲೆ ಕಾರ್ಯಕ್ರಮವು ಲಯನ್ಸ್ ಸೇವಾ ಮಂದಿರ ಪುತ್ತೂರಲ್ಲಿ ಜೂನ್ 15 ರಂದು ಸಮಾರೋಪ ಸಮಾರಂಭದಲ್ಲಿ ಗಣ್ಯರ ಸಮ್ಮುಖದಲ್ಲಿ ನಡೆಯಿತು.
ಆ ವೇದಿಕೆಯಲ್ಲಿ ಕೃಷಿಕ-ಲೇಖಕ ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಗಳಿಗೆ ಅಂತರ್ ರಾಜ್ಯ ಮಟ್ಟದ ಕೃಷಿ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಆರ್ ಪಿ ಕಲಾ ಸೇವಾ ಟ್ರಸ್ಟ್ (ರಿ) ಪಾಂಬರ್ ಸಂಚಾಲಕ ರವಿ ಪಾಂಬರ್ ಮತ್ತು ಅಧ್ಯಕ್ಷ ಶ್ರೀಧರ್ ಎಕ್ಕಡ್ಕ ಪ್ರಶಸ್ತಿ ಪ್ರದಾನ ಮಾಡಿದರು.
ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿದ ನಿಮಗೆ ಅಭಿನಂದನೆಗಳೊಂದಿಗೆ ಇನ್ನಷ್ಟು ಸಾಧನೆಗಳು ನಿಮ್ಮದಾಗಲಿ ಎಂದು ಶುಭ ಹಾರೈಸಿದರು. ಪೇಟ, ಶಾಲು, ಸ್ಮರಣಿಕೆ, ಅಭಿನಂದನ ಪತ್ರಗಳನ್ನು ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ವೇದಿಕೆಯಲ್ಲಿ ಪೂಡಾ ಅಧ್ಯಕ್ಷ ಅಮಳ ರಾಮಚಂದ್ರ, ಸದಾನಂದ ಮಾವಾಜಿ, ಪದ್ಮರಾಜ ರಾಜ್ ಬಿ ಸಿ, ಚಾರ್ವಾಕ ವಿಜಯಕುಮಾರ್ ಸುಳ್ಯ, ರಾಮ ಪಾoಬಾರು, ಮಮತಾ ಮಡಿಕೇರಿ, ಸನತ್ ಕೆ, ಪ್ರಜ್ವಲ್ ಕೆ, ನವ್ಯ ಕೆ, ಹರೀಶ್ ಪಂಜಿಕಲ್ಲು, ಸಂದೀಪ್ ಅಡ್ಯನಡ್ಕ ಮಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ