ಕುಳಾಯಿ: ಬಿ.ಎ.ಎಸ್.ಎಫ್ ವತಿಯಿಂದ ನೋಟ್ಸ್ ಪುಸ್ತಕ, ಶೈಕ್ಷಣಿಕ ಪರಿಕರಗಳ ವಿತರಣೆ

Chandrashekhara Kulamarva
0


ಸುರತ್ಕಲ್‌: ಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಉನ್ನತಿಗೆ ಸಹಾಯ ಮಾಡುವ ಮೂಲಕ ಕೈಗಾರಿಕಾ ಸಂಸ್ಥೆಗಳು ಉತ್ತಮ ಕಾರ್ಯನಿರ್ವಹಿಸುತ್ತಿವೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಉಪ ಮೇಯರ್ ಹಾಗೂ ಸದಸ್ಯೆ ವೇದಾವತಿ ಅವರು ನುಡಿದರು.


ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಪ್ರಾಥಮಿಕ ಶಾಲೆ ಚಿತ್ರಾಪುರ ಕುಳಾಯಿಯ ವಿದ್ಯಾರ್ಥಿಗಳಿಗೆ ಸುರತ್ಕಲ್‌ನ ಬಿ.ಎ.ಎಸ್.ಎಫ್ ಕೈಗಾರಿಕಾ ಸಂಸ್ಥೆ ಕೊಡ ಮಾಡಿರುವ ನೋಟ್ಸ್ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳನ್ನು ವಿತರಿಸಿ ಮಾತನಾಡಿದರು.


ಬಿ.ಎ.ಎಸ್. ಎಫ್. ಸಂಸ್ಥೆಯ ಮಾನವ ಸಂಪನ್ಮೂಲ ಅಭಿವೃದ್ಧಿ ಅಧಿಕಾರಿ ಸಂತೋಷ್ ಪೈ ಮಾತನಾಡಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ನಮ್ಮ ಸಂಸ್ಥೆ ವಿಶೇಷ ಪ್ರೋತ್ಸಾಹ ನೀಡಿ ಬೆಂಬಲಿಸುತ್ತದೆ ಎಂದರು.


ಶಾಲಾ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಕೃಷ್ಣಮೂರ್ತಿ ಚಿತ್ರಾಪುರ ಮಾತನಾಡಿ, ವಿದ್ಯಾರ್ಥಿಗಳು ತಮಗೆ ನೀಡಿದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.


ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಾಧವ ಸುವರ್ಣ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಉನ್ನತಿಗೆ  ಕೈಗಾರಿಕಾ ಸಂಸ್ಥೆಗಳ ಸಹಕಾರ ಅಗತ್ಯ ಎಂದು ನುಡಿದರು.


ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಭರತ್ ಕುಮಾರ್ ಕುಳಾಯಿ, ಜೊತೆ ಕಾರ್ಯದರ್ಶಿ ಕುಮಾರ್ ಬಂಗೇರ, ಸದಸ್ಯ ತೇಜಪಾಲ್ ಪುತ್ರನ್, ನಿವೃತ್ತ ಶಿಕ್ಷಕಿ ಪುಷ್ಪಾವತಿ ಶ್ರೀನಿವಾಸ ರಾವ್ ಶುಭ ಹಾರೈಸಿದರು.


ಬಿ.ಎ.ಎಸ್.ಎಫ್ ಸಂಸ್ಥೆಯ ಅರಿಂಜಯ, ಶ್ರೀನಿವಾಸ ರಾವ್, ಶಿಕ್ಷಕಿ ಸುಕೇಶಿನಿ, ಜೆಸಿಂತಾ ಮತ್ತು ರೂಪ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಶೋಭಾ ಸ್ವಾಗತಿಸಿದರು.ನೀತ ತಂತ್ರಿ ವಂದಿಸಿದರು. ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕ, ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top