ಜೂ.27ರಂದು ಬೆಸೆಂಟ್ ಪ.ಪೂ. ಕಾಲೇಜಿನಲ್ಲಿ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

Chandrashekhara Kulamarva
0


ಮಂಗಳೂರು: ಅಮೃತ ಪ್ರಕಾಶ ಹಾಗೂ ಬೆಸೆಂಟ್ ಪ.ಪೂ.ಕಾಲೇಜಿನ ವತಿಯಿಂದ ಜೂ.27ರಂದು ಮಧ್ಯಾಹ್ನ 2.30ಕ್ಕೆ ಬೆಸೆಂಟ್ ಪ.ಪೂ.ಕಾಲೇಜಿನ ಸಭಾಂಗಣದಲ್ಲಿ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ನಡೆಯಲಿದೆ.


ಕಾಲೇಜಿನ ಪ್ರಾಂಶುಪಾಲ ಡಾ.ನಾಯಕ್ ರೂಪಸಿಂಗ್ ಅಧ್ಯಕ್ಷತೆ ವಹಿಸಲಿದ್ದಾರೆ. ಜನಪದ ವಿದ್ವಾಂಸ ಡಾ.ಗಣೇಶ್ ಅಮೀನ್ ಸಂಕಮಾರ್, ಲೇಖಕಿ ಡಾ. ಮೀನಾಕ್ಷಿ ರಾಮಚಂದ್ರ ಸಂಪನ್ಮೂಲ ವ್ಯಕ್ತಿಗಳಾಗಿ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಜಾನಪದ ಪರಿಷತ್‌ನ ಜಿಲ್ಲಾಧ್ಯಕ್ಷ ಪಮ್ಮಿ ಕೊಡಿಯಾಲ್‌ಬೈಲ್, ಯೋಗಗುರು ಜಗದೀಶ್ ಶೆಟ್ಟಿ ಬಿಜೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಘಟಕಿ ಮಾಲತಿ ಶೆಟ್ಟಿ ಮಾಣೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


إرسال تعليق

0 تعليقات
إرسال تعليق (0)
To Top