ಎಂ.ಸಿ.ಸಿ. ಬ್ಯಾಂಕಿನಿಂದ ನೋಟ್ ಪುಸ್ತಕ, ಕೊಡೆ ಮತ್ತು ಸ್ಕೂಲ್ ಬ್ಯಾಗ್ ವಿತರಣೆ

Upayuktha
0

ಮಂಗಳೂರು: ಸಾಮಾಜಿಕ ಜವಾಬ್ದಾರಿ ಮತ್ತು ಸಮುದಾಯ ಅಭಿವೃದ್ಧಿಯತ್ತ ತನ್ನ ಅಚಲ ಬದ್ಧತೆಯ ಭಾಗವಾಗಿ, ಎಂಸಿಸಿ ಬ್ಯಾಂಕ್ 2025 ಜೂನ್ ತಿಂಗಳಲ್ಲಿ ಮಂಗಳೂರು, ಉಡುಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಾದ್ಯಂತ ವಿವಿಧ ಶಾಲೆಗಳು, ಅನಾಥಾಶ್ರಮಗಳು ಮತ್ತು ಸಂಸ್ಥೆಗಳಿಗೆ ನೋಟ್ ಪುಸ್ತಕ, ಕೊಡೆ ಮತು ಸ್ಕೂಲ್ ಬ್ಯಾಗ್‌ಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.


ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಮತ್ತು ನಿರ್ದೇಶಕರ ಮಂಡಳಿಯ ನೇತೃತ್ವದಲ್ಲಿ ನಡೆಯುತ್ತಿರುವ ಈ ಚಟುವಟಿಕೆಗಳು, ಅರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸೇವೆ ಸಲ್ಲಿಸಲು ಮತ್ತು ಶೈಕ್ಷಣಿಕ ಸಬಲೀಕರಣವನ್ನು ಉತ್ತೇಜಿಸಲು ಬ್ಯಾಂಕಿನ ಸಮರ್ಪಣೆಯನ್ನು ಪ್ರತಿಬಿಂಬಿಸುತ್ತವೆ.


ಪಡುಕೋಣೆಯ ಸೈಂಟ್ ಆಂಟನಿ ಪ್ರಾಥಮಿಕ ಶಾಲೆ, ಗಂಗೊಳ್ಳಿಯ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆ, ಕುಂದಾಪುರದ ಸೈಂಟ್ ಮೇರಿ ಶಾಲೆ, ಕುಂದಾಪುರದ ಸೈಂಟ್ ಜೋಸೆಫ್ ಪ್ರಾಥಮಿಕ ಮತ್ತು ಪ್ರೌಢಶಾಲೆ, ಬ್ರಹ್ಮಾವರದ ನಿರ್ಮಲಾ ಪ್ರೌಢಶಾಲೆ ಮತ್ತು ಕೊಸ್ಮೊಪೊಲಿಟನ್ ಹಿರಿಯ ಪ್ರಾಥಮಿಕ ಶಾಲೆ, ಮಂಗಳೂರಿನ ಕೂಳೂರು ಪ್ರೌಢಶಾಲೆ, ಬಿಜೈಯ ಸೈಂಟ್ ಅಂಜೆಲಾ ಹೋಂ, ಡಿ ಮರ್ಸಿಡ್ ಅನಾಥಾಶ್ರಮ, ಪಾನೀರ್, ಪಾಲಡ್ಕದ ಸೈಂಟ್ ಇಗ್ನೇಷಿಯಸ್ ಲೊಯೊಲಾ ಶಾಲೆ, ಜೆಪ್ಪುವಿನ ಸೈಂಟ್ ರೀಟಾ ಹಿರಿಯ ಪ್ರಾಥಮಿಕ ಶಾಲೆ, ಉರ್ವಾದದ ಲೇಡಿಹಿಲ್ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪುತ್ತೂರಿನ ಮಾಯ್ ದೆ ದೆವೂಸ್ ಹಿರಿಯ ಪ್ರಾಥಮಿಕ ಶಾಲೆಯ ಅರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ನೋಟ್ ಬುಕ್, ಶಾಲಾ ಬ್ಯಾಗ್ ಮತ್ತು ಕೊಡೆಗಳನ್ನು ವಿತರಣೆ ಮಾಡಲಾಯಿತು. ಜೆಪ್ಪುವಿನ ಸಂತ ಅಂತೋನಿ ಆಶ್ರಮದ ನಿವಾಸಿಗಳಿಗೆ ಕೊಡೆಗಳನ್ನು ವಿತರಿಸಲಾಯಿತು.


ಬ್ಯಾಂಕಿನ ಈ ಉದಾತ್ತ ಕಾರ್ಯಕ್ಕೆ ಮೇಲ್ಕಂಡ ಸಂಸ್ಥೆಗಳ ಮುಖ್ಯಸ್ಥರು, ವಿದ್ಯಾ ಸಂಸ್ಥೆಗಳಲ್ಲಿ ಓದುತ್ತಿರುವ ಬಡ ಮಕ್ಕಳು ಮತ್ತು ಆಶ್ರಮದ ನಿವಾಸಿಗಳ ಬಗ್ಗೆ ಔದಾರ್ಯ ಮತ್ತು ಕಾಳಜಿಯನ್ನು ತೋರಿಸಿದ್ದಕ್ಕಾಗಿ ಬ್ಯಾಂಕಿನ ಅಧ್ಯಕ್ಷರು ಮತ್ತು ನಿರ್ದೇಶಕರಿಗೆ ಧನ್ಯವಾದಗಳನ್ನು ಅರ್ಪಿಸಿದರು.


ಈ ಹೃದಯಸ್ಪರ್ಶಿ ಕೊಡುಗೆಗಳ ಮೂಲಕ, ಎಂ.ಸಿ.ಸಿ. ಬ್ಯಾಂಕ್ ತನ್ನ ಸಹಾನುಭೂತಿ ಮತ್ತು ಸೇವೆಯ ಮೂಲ ಮೌಲ್ಯಗಳನ್ನು ಪ್ರದರ್ಶಿಸಿದೆ. ಸುಮಾರು 10 ಲಕ್ಷಕ್ಕಿಂತ ಹೆಚ್ಚಿನ ವೆಚ್ಚದ ಕೊಡೆಗಳು, ಶಾಲಾ ಬ್ಯಾಗ್, ಮತ್ತು ನೋಟ್‌ಬುಕ್‌ಗಳ ವಿತರಣೆಯು ಅನೇಕ ವಿದ್ಯಾಸಂಸ್ಥೆಗಳಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅಗತ್ಯವಾದ ಬೆಂಬಲವನ್ನು ನೀಡುವುದಲ್ಲದೆ, ಕೃತಜ್ಞತೆ ಮತ್ತು ಪರಿಶ್ರಮದ ಸಂಸ್ಕೃತಿಯನ್ನು ಪ್ರೇರೇಪಿಸಿತು. ಎಂ.ಸಿ.ಸಿ. ಬ್ಯಾಂಕ್ ಇಂತಹ ಅರ್ಥಪೂರ್ಣ ಸಂಪರ್ಕದ ಮೂಲಕ ಯುವಕರನ್ನು ಸಬಲೀಕರಣಗೊಳಿಸಲು ಮತ್ತು ಸಮುದಾಯವನ್ನು ಬಲಪಡಿಸಲು ಬದ್ಧವಾಗಿದೆ.


ಈ ಸಂದರ್ಭದಲ್ಲಿ ಮಾತನಾಡಿದ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ, ವಿದ್ಯಾರ್ಥಿಗಳು ಬ್ಯಾಂಕಿನ ಬೆಂಬಲವನ್ನು ನೆನಪಿಸಿಕೊಳ್ಳಬೇಕೆಂದು ಕರೆ ನೀಡಿದರು. ವಿದ್ಯಾರ್ಥಿಗಳು ಬೆಳೆದು ಸಾಮಾಜಿಕ ಸ್ಥಾನಮಾನವನ್ನು ಸಾಧಿಸಿದಾಗ ಸಾಮಾಜಿಕವಾಗಿ ಹಿಂದುಳಿದವರ ಬಗ್ಗೆ ಸಹಾನುಭೂತಿ ಹೊಂದಬೇಕೆAದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. 


ಶಿಕ್ಷಣದಲ್ಲಿ ಸಮಾನತೆಯನ್ನು ಅವರು ಒತ್ತಿ ಹೇಳಿದರು ಮತ್ತು ಆತ್ಮ ವಿಶ್ವಾಸವನ್ನು ಬೆಳೆಸಿಕೊಳ್ಳಬೇಕು ಎಂದು ನುಡಿದರು. ಉತ್ಸಾಹಿ ವಿದ್ಯಾರ್ಥಿಗಳೊಂದಿಗೆ ಭಾಗವಹಿಸಲು ಅವಕಾಶ ಸಿಕ್ಕಿದ್ದಕಾಗಿ ಅವರು ಸಂತೋಷ ವ್ಯಕ್ತಪಡಿಸಿ ಪೋಷಣೆಯ ಶೈಕ್ಷಣಿಕ ವಾತಾವರಣವನ್ನು ಒದಗಿಸಿದ್ದಕ್ಕಾಗಿ ಸಂಸ್ಥೆಗಳನ್ನು ಶ್ಲಾಘಿಸಿದರು. ಅರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಬೆಂಬಲಿಸುವ ಎಂಸಿಸಿ ಬ್ಯಾಂಕಿನ ಧ್ಯೇಯವನ್ನು ಪುನರುಚ್ಚರಿಸಿದರು.


ನಿರ್ದೇಶಕರಾದ ಡಾ| ಜೆರಾಲ್ಡ್ ಪಿಂಟೊ, ಎಲ್‌ರೊಯ್ ಕಿರಣ್ ಕ್ರಾಸ್ಟೊ, ಸುಶಾಂತ್ ಸಲ್ಡಾನಾ,  ಶರ್ಮಿಳಾ ಮಿನೇಜಸ್, ಐರಿನ್ ರೆಬೆಲ್ಲೊ, ರೋಶನ್ ಡಿಸೋಜಾ, ಹೆರಾಲ್ಡ್ ಜೆ. ಮಾಂತೆರೊ, ಜೆ.ಪಿ. ರೋಡ್ರಿಗಸ್, ಅಂಡ್ರ್ಯೂ ಡಿಸೋಜ ಮತ್ತು ಕುಂದಾಪುರ, ಬ್ರಹ್ಮಾವರ, ಅಶೋಕನಗರ, ಕಂಕನಾಡಿ, ಮಾರ್ಗನ್ಸ್ಗೇಟ್, ಪುತ್ತೂರು ಮತ್ತು ಉಳ್ಳಾಲ ಶಾಖೆಗಳ ಶಾಖಾ ವ್ಯವಸ್ಥಾಪಕರು ಕೂಡ ಭಾಗವಹಿಸಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top