ಮರೋಳಿ: ಗಣೇಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Upayuktha
0


ಮಂಗಳೂರು: ಮರೋಳಿ ಜೋಡುಕಟ್ಟೆಯ ಸಮಾಜ ಸೇವಾ ಪ್ರತಿಷ್ಠಾನದ ಆವರಣದ ವಜ್ರಕಾಯ ರಂಗ ಮಂದಿರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ನಡೆಯುವ 20ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಮರೋಳಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದಲ್ಲಿ ಶಾಸಕ ಡಿ.ವೇದವ್ಯಾಸ ಕಾಮತ್ ಶುಕ್ರವಾರ ಬಿಡುಗಡೆಗೊಳಿಸಿದರು.


ನಂತರ ಮಾತನಾಡಿದ ಅವರು, ಸ್ವಾತಂತ್ರ್ಯಪೂರ್ವದಲ್ಲಿ ಜನರಲ್ಲಿ ಒಗ್ಗಟ್ಟು ಮೂಡಿಸಲು ಬಾಲಗಂಗಾಧರ ತಿಲಕ್ ಅವರ ಚಿಂತನೆಯಲ್ಲಿ ಮೂಡಿಬಂದಂತಹ ಸಾರ್ವಜನಿಕ ಶ್ರೀಗಣೇಶೋತ್ಸವವು ಅಂದು ಬಹಳ ಮಹತ್ವವನ್ನು ಪಡೆದುಕೊಂಡಿತ್ತು. ಇದೇ ಹಾದಿಯಲ್ಲಿ ಸಾಗಿರುವ ಮರೋಳಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧಾರ್ಮಿಕ ಚಿಂತನೆಯನ್ನಿರಿಸಿ ಹತ್ತು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ. ಸಮಾಜ ಸೇವಾ ಪ್ರತಿಷ್ಠಾನ ಧಾರ್ಮಿಕ ಕಾರ್ಯಕ್ರಮಗಳಲ್ಲದೆ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಂಡು ಇತರ ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದರು.


ಮರೋಳಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಅನಿಲ್ ಕೆ ಕೆಂಬಾರ್, ಕೋಶಾಕಾರಿ ಹರೀಶ್ ಶೆಟ್ಟಿ, ಸೂರ್ಯನಾರಾಯಣ ದೇವಸ್ಥಾನ ಆಡಳಿತ ಮೊಕ್ತೇಸರ ಗುಡ್ಡೆ ಗುತ್ತು ಗಣೇಶ್ ಶೆಟ್ಟಿ, ಸೂರ್ಯನಾರಾಯಣ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಗಿರಿಧರ್ ಶೆಟ್ಟಿ, ನಿಕಟಪೂರ್ವ ಕಾರ್ಪೊರೇಟರ್ ಕೇಶವ ಮರೋಳಿ, ಜಯರಾಂ ಮರೋಳಿ, ರೋಹಿತಾಕ್ಷ ಮರೋಳಿ, ಜ್ಯೋತಿ ಕುಮಾರ್, ರತನ್ ಶೆಟ್ಟಿ ಕಂಕನಾಡಿ, ನವೀನ್ ಪ್ರಭು, ಆಶಾ ರಾಜೀವ್, ಪ್ರಶಾಂತ್ ಮರೋಳಿ, ಕಿಶೋರ್ ಶೆಟ್ಟಿ ಸೂರ್ಯನಗರ, ಭವಾನಿ ಶಂಕರ್ ಮರೋಳಿ, ಸರಳ ಎಸ್, ರಾಘವೇಂದ್ರ ಶೆಟ್ಟಿ, ತುಷಾರ್ ಎ. ಕೆಂಬಾರ್ ಮತ್ತಿತರರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top