ಮೆಡಿಕವರ್ ಆಸ್ಪತ್ರೆ, ಬೆಂಗಳೂರು: ಆರ್ಥೋಪೆಡಿಕ್ಸ್ ವಿಭಾಗದ ಉತ್ಕೃಷ್ಟತಾ ಕೇಂದ್ರಕ್ಕೆ ಭವ್ಯ ಉದ್ಘಾಟನೆ

Chandrashekhara Kulamarva
0


ಬೆಂಗಳೂರು, ವೈಟ್‌ ಫೀಲ್ದ್‌: ಮೆಡಿಕವರ್ ಆಸ್ಪತ್ರೆ, ಬೆಂಗಳೂರು ಘಟಕದಲ್ಲಿ ಇಂದು ಬೆಳಿಗ್ಗೆ ಆರ್ಥೋಪೆಡಿಕ್ಸ್ ವಿಭಾಗದ ಉತ್ಕೃಷ್ಟತಾ ಕೇಂದ್ರವನ್ನು ಭವ್ಯವಾಗಿ ಉದ್ಘಾಟಿಸಲಾಯಿತು. ನೂತನ ಕೇಂದ್ರವು ಸಂಯೋಜಿತ ರೋಬೊಟಿಕ್ ಶಸ್ತ್ರಚಿಕಿತ್ಸಾ ತಂತ್ರಜ್ಞಾನವನ್ನು ಪರಿಚಯಿಸಿ, ಮೂಳೆ-ಸಂಧಿ ಚಿಕಿತ್ಸೆಯಲ್ಲಿ ಮಹತ್ತರ ಹೆಜ್ಜೆ ಇಟ್ಟಿದೆ.


ಆರ್ಥೋ ವಿಂಗ್‌ನ ನಡೆದ ಈ ಕಾರ್ಯಕ್ರಮದಲ್ಲಿ, ಆಸ್ಪತ್ರೆಯ ಮುಖ್ಯಸ್ಥರಾದ ಕೃಷ್ಣಮೂರ್ತಿ ಜಿ, ಮಾರ್ಕೆಟಿಂಗ್‌ ವಿಭಾಗದ ಮುಖ್ಯಸ್ಥ ಪ್ರಮೋದ್‌ ಯು, ಆಸ್ಪತ್ರೆಯ ಹಿರಿಯ ಮೂಳೆ ತಜ್ಞರಾದ ಆರ್‌ ಡಿ ಚಕ್ರವರ್ತಿ, ಸಂಜಯ್‌ ಹೆಗಡೆ, ರವೀಂದ್ರ ಪುಟ್ಟಸ್ವಾಮಯ್ಯ, ಕೃಷ್ಣಕುಮಾರ್‌ ಹಾಗೂ ರಾಘವೇಂದ್ರ ರೆಡ್ಡಿಯವರು ಭಾಗವಹಿಸಿ ಕೇಂದ್ರವನ್ನು ಉದ್ಘಾಟಿಸಿದರು. ಈ ಮೂಲಕ ಹೆಚ್ಚು ನಿಖರತೆ, ಕಡಿಮೆ ಪುನಶ್ಚೇತನ ಸಮಯ ಮತ್ತು ಉತ್ತಮ ಗುಣಮಟ್ಟದ ಚಿಕಿತ್ಸೆ ಫಲಿತಾಂಶಗಳನ್ನು ಸಾಧಿಸುವ ಉದ್ದೇಶವಿದೆ.


ಮೆಡಿಕವರ್ ಆಸ್ಪತ್ರೆಯ ಮುಖ್ಯಸ್ಥರಾದ ಕೃಷ್ಣಮೂರ್ತಿ ಅವರು ಮಾತನಾಡಿ, “ಈ ರೋಬೊಟಿಕ್ ತಂತ್ರಜ್ಞಾನದಿಂದ ನಾವು ಹೆಚ್ಚು ನಿಖರವಾದ ಶಸ್ತ್ರಚಿಕಿತ್ಸೆ ನಡೆಸಬಹುದು. ಇದು ನೂರಾರು ಸಂಧಿ ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಆಶಾದಾಯಕವಾಗಿದೆ” ಎಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಎಲ್ಲಾ ವಿಭಾಗದ ಮುಖ್ಯಸ್ಥರು ಭಾಗಿಯಾಗಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



إرسال تعليق

0 تعليقات
إرسال تعليق (0)
To Top