ಬ್ರಹ್ಮಾವರ: ದಂತ ತಪಾಸಣಾ ಶಿಬಿರ

Chandrashekhara Kulamarva
0


ಬ್ರಹ್ಮಾವರ: ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಭಾರತೀಯ ಜನ ಔಷಧಿ ಕೇಂದ್ರ ಮತ್ತು ಸುಪ್ರೀಂ ಫೀಡ್ಸ್ ಹೇರೂರು ಇದರ ಆಶ್ರಯದಲ್ಲಿ ಮಣಿಪಾಲ ದಂತ ವೈದ್ಯಕೀಯ ಮಹಾವಿದ್ಯಾಲಯ ಇದರ ಸಹಯೋಗದೊಂದಿಗೆ ಬೃಹತ್ ದಂತ ತಪಾಸಣಾ ಶಿಬಿರ ಸುಪ್ರೀಂ ಫೀಡ್ಸ್ ಆವರಣದಲ್ಲಿ ಜೂನ್ 21ರಂದು  ನಡೆಯಿತು.


ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಧ್ಯಾಪಕ ಡಾ. ಶಶಿಧರ್ ಆಚಾರ್ಯ, ದಂತ ತಪಾಸಣೆಯನ್ನು ನಿಯಮಿತವಾಗಿ ಮಾಡಿಕೊಂಡಾಗ ಅನೇಕ ಕಾಯಿಲೆಗಳನ್ನು ನಾವು ಬರದಂತೆ ತಡೆಯಲು ಸಾಧ್ಯ. ನಮ್ಮ ಹಲ್ಲುಗಳು ನಮ್ಮ ವ್ಯಕ್ತಿತ್ವದ ಪ್ರಮುಖ ಸಾಧನವಾಗಿದೆ ಎಂದರು.


ವೇದಿಕೆಯಲ್ಲಿ ಸುಪ್ರೀಂ ಫೀಡ್ಸನ ಪ್ರಮುಖರಾದ ಸತೀಶ್, ಸುರೇಶ್, ಕಮಲಾಕ್ಷ, ಸುಂದರ ಪೂಜಾರಿ ಮೂಡುಕುಕ್ಕುಡೆ ಜಯಂಟ್ಸ್ ಫೆಡರೇಶನ್ ಮಾಜಿ ಅಧ್ಯಕ್ಷ ಮಧುಸೂದನ್ ಹೇರೂರು, ಅಧ್ಯಕ್ಷ ಅಣ್ಣಯ್ಯ ದಾಸ್, ಪೂರ್ವ ಅಧ್ಯಕ್ಷರಾದ ವಿವೇಕಾನಂದ ಕಾಮತ್, ಕಾರ್ಯದರ್ಶಿ ಮಿಲ್ಟನ್ ಒಲಿವರ್ ಮುಂತಾದವರು ಉಪಸ್ಥಿತರಿದ್ದರು.


ಶಿಬಿರದಲ್ಲಿ ಮಣಿಪಾಲ ದಂತ ವೈದ್ಯಕೀಯ ಸಂಸ್ಥೆಯ ವೈದ್ಯರು ಸಹಕರಿಸಿದರು. ರಾಘವೇಂದ್ರ ಕರ್ವಾಲು ನಿರೂಪಿಸಿ, ವಂದಿಸಿದರು. ಮಧುಸೂಧನ್ ಹೇರೂರು ಸ್ವಾಗತಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top