ಬಪ್ಪಳಿಗೆ ಅಂಬಿಕಾ ಪ.ಪೂ. ವಿದ್ಯಾಲಯದಲ್ಲಿ ನೈತಿಕ ಶಿಕ್ಷಣ ತರಗತಿಗಳ ಉದ್ಘಾಟನೆ

Chandrashekhara Kulamarva
0

ವಿದ್ಯಾರ್ಥಿಗಳಿಗೆ ಹೆತ್ತವರು ಹಾಗೂ ಗುರುವಿನ ಆಶೀರ್ವಾದ ಮುಖ್ಯ: ಆದರ್ಶ ಗೋಖಲೆ




ಪುತ್ತೂರು: ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಏಳಿಗೆಗೆ ತಂದೆ ತಾಯಿ ಹಾಗೂ ಗುರುವಿನ ಆಶೀರ್ವಾದ ಮುಖ್ಯ. ಯಾವ ವಿದ್ಯಾರ್ಥಿ ಈ ಮೂವರ ಮಾತನ್ನು ಅಲ್ಲಗಳೆಯುತ್ತಾನೋ ಅಂತಹವನು ಜೀವನದಲ್ಲಿ ಕಷ್ಟವನ್ನು ಅನುಭವಿಸುತ್ತಾನೆ ಎಂದು ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಉಪನ್ಯಾಸಕ ಆದರ್ಶ ಗೋಖಲೆ ಹೇಳಿದರು.


ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಮಂಗಳವಾರ ನಡೆದ ನೈತಿಕ ಶಿಕ್ಷಣ ತರಗತಿಗಳ ಉದ್ಘಾಟನಾ ಸಮಾರಂ¨ಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. 


ಧರ್ಮ ಪ್ರೇಮ ಮತ್ತು ದೇಶಪ್ರೇಮ ವಿದ್ಯಾರ್ಥಿಗಳಲ್ಲಿ ಒಡಮೂಡಬೇಕು. ಅವೆರಡು ನಮ್ಮ ವ್ಯಕ್ತಿತ್ವದ ಅತ್ಯಂತ ಪ್ರಮುಖ ವಿಚಾರಗಳೆನಿಸಬೇಕು. ಹಾಗಾದಾಗ ಮಾತ್ರ ವಿದ್ಯಾರ್ಥಿಗಳು ನಾಳೆಯ ದಿನ ಈ ದೇಶಕ್ಕೆ ಕಿಒಡುಗೆ ಕೊಡಬಲ್ಲ ಸ್ಥಾನಕ್ಕೆ ಏರುವುದಕ್ಕೆ ಸಾಧ್ಯ. ಅಂತಹ ಮಟ್ಟಕ್ಕೆ ಬೆಳೆಯುವ ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರಯತ್ನಪಡಬೇಕು ಎಂದು ನುಡಿದರು.


ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳಾ ಗಣೇಶ್ ಪ್ರಸಾದ್ ಎ ಉದ್ಘಾಟಿಸಿ, ಶುಭ ಹಾರೈಸಿದರು. ಕಾಲೇಜಿನ ಪ್ರಾಚಾರ್ಯ ಗಣೇಶ್ ಪ್ರಸಾದ್ ಡಿ.ಎಸ್. ಹಾಗೂ ಉಪ ಪ್ರಾಚಾರ್ಯ ಪ್ರದೀಪ್ ಕೆ. ವೈ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಧೃತಿ ಭಟ್ ಪ್ರಾರ್ಥಿಸಿದರು. ಗಣಿತಶಾಸ್ತ್ರ ಉಪನ್ಯಾಸಕಿ ಜೀವಿತ ಕೆ.ಎಸ್. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top