ಮುಂಡಾಜೆ: ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಪ್ರಾರಂಭೋತ್ಸವ

Chandrashekhara Kulamarva
0


ಬೆಳ್ತಂಗಡಿ: ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆ ಇಲ್ಲಿನ 2025 -26 ನೇ  ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಕಾಲೇಜಿನ ಪ್ರಾರಂಭೋತ್ಸವವು ಸೋಮವಾರ (ಜೂ.2) ನಡೆಯಿತು.


ಆಡಳಿತ ವೃಂದ, ಉಪನ್ಯಾಸಕ ವೃಂದ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಹೂವನ್ನು ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು. ಆ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ, ಶೈಕ್ಷಣಿಕ ವರ್ಷದ ಶುಭಾರಂಭ ಕೈಗೊಳ್ಳಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶತಾಬ್ದಿ ವಿದ್ಯಾಲಯ ಸಮಿತಿಯ ಸಂಚಾಲಕ ನಾರಾಯಣ ಫಡ್ಕೆ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಕೇವಲ ಅಂಕಗಳನ್ನು ಗಳಿಸುವುದು ಮುಖ್ಯವಲ್ಲ; ಜೀವನ ಕೌಶಲಗಳನ್ನು ಕಲಿತು ಮೌಲ್ಯಾಧಾರಿತ ಜೀವನವನ್ನು ನಡೆಸುವುದು ಮುಖ್ಯ ಎಂದರು.


ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ, ಇದರ ಕಾರ್ಯದರ್ಶಿ ನಾರಾಯಣಗೌಡ ಕೊಳಂಬೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಾಂಶುಪಾಲೆ ಗೀತಾ ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ಪದ್ಮನಾಭ ಬಿ.ಕೆ  ವಂದಿಸಿದರು ಕನ್ನಡ ಉಪನ್ಯಾಸಕಿ ವಸಂತಿ ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top