ಮುಂಡಾಜೆ: ವಿಶ್ವ ಯೋಗ ದಿನಾಚರಣೆ

Upayuktha
0


ಮುಂಡಾಜೆ: 'ಒಂದು ಭೂಮಿಗಾಗಿ, ಒಂದು ಆರೋಗ್ಯಕ್ಕಾಗಿ ಯೋಗ' ಎಂಬ ಧ್ಯೇಯ ವಾಕ್ಯದೊಂದಿಗೆ ಮುಂಡಾಜೆ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ & ರೇಂಜರ್ಸ್ ಘಟಕದ ಸಹಯೋಗದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. 


ಉಜಿರೆಯ ಶ್ರೀ ಧ.ಮಂ. ಪ್ರಕೃತಿ ಮತ್ತು ಯೋಗ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಹರ್ಷಿಣಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, 'ನಮ್ಮ ಮನಸ್ಸು ಮತ್ತು ದೇಹವನ್ನು ಹತೋಟಿಯಲ್ಲಿಡಲು ಯೋಗ ಉತ್ತಮವಾದ ವಿಧಾನ; ಪರಿಸರದೊಂದಿಗೆ ಅವಲಂಬಿತರಾದ ನಾವು ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಆರೋಗ್ಯಕ್ಕಾಗಿ ಪ್ರತಿದಿನ ಯೋಗಾಭ್ಯಾಸ ಮಾಡಬೇಕು' ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಗೀತಾ ಮಾತನಾಡಿ, ಯೋಗದ ಹಿನ್ನೆಲೆ ಹಾಗೂ ವಿದ್ಯಾರ್ಥಿಗಳಿಗೆ ಯೋಗದ ಪ್ರಸ್ತುತತೆಯನ್ನು ತಿಳಿಸಿದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ನಮಿತಾ ಕೆ ಆರ್ ಸ್ವಾಗತಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಶ್ರಾವ್ಯ ನಿರೂಪಿಸಿ, ನಳಿನಿ ಧನ್ಯವಾದಗೈದರು.


ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಯೋಗಪ್ರದರ್ಶನ ಹಾಗೂ ಶ್ಲೋಕ ಪಠಣ ನಡೆಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top