ಒಲಿಂಪಿಯಾಡ್ ಪರೀಕ್ಷೆ ಫಲಿತಾಂಶ: ಅಂಬಿಕಾ ಸಿ.ಬಿ.ಎಸ್.ಇ ಸಂಸ್ಥೆಯ ಚಿರಾಗ್‍ಗೆ ಬೆಳ್ಳಿ ಪದಕ

Upayuktha
0


ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ವಿದ್ಯಾರ್ಥಿಗಳು 2024 - 2025 ನೇ ಸಾಲಿನ ಡಿಸೆಂಬರ್ ತಿಂಗಳಿನಲ್ಲಿ ಸಿಲ್ವರ್ ಝೋನ್ ಫೌಂಡೇಶನ್ ನಡೆಸಿರುವ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿದ್ದಾರೆ. ಪರೀಕ್ಷೆ ಬರೆದಿದ್ದ 512 ಮಂದಿ ವಿದ್ಯಾರ್ಥಿಗಳಲ್ಲಿ 5ನೇ ತರಗತಿಯ ಸಂಹಿತ್ ಜೋಸ್ಸಿ ಲೋಬೋ, 2 ನೇ ತರಗತಿಯ ಚಿರಾಗ್ ಎಸ್ ಪಟ್ಟೆ,  1ನೇ ತರಗತಿಯ ಹರ್ಷಿಲ್ ಬಂಗೇರ ಎನ್ ಇಂಗ್ಲೀμï ವಿಷಯದಲ್ಲಿ ಹಾಗೂ 2 ನೇ ತರಗತಿಯ ಶಾರ್ವಿ ಕೆ.ಎಚ್. ವಿಜ್ಞಾನ ವಿಷಯದಲ್ಲಿ ದ್ವಿತೀಯ ಹಂತದ ಪರೀಕ್ಷೆಗೆ ಆಯ್ಕೆಯಾಗಿದ್ದರು. ಈ ಪರೀಕ್ಷೆಯಲ್ಲಿ ಚಿರಾಗ್ ಎಸ್ ಪಟ್ಟೆ ಇವರು ಬೆಳ್ಳಿ ಪದಕ ವಿಜೇತರಾಗಿದ್ದಾರೆ.  


ಪ್ರಥಮ ಹಂತದ ಪರೀಕ್ಷೆಯಲ್ಲಿ 90 ವಿದ್ಯಾರ್ಥಿಗಳು ಚಿನ್ನದ ಪದಕ ಮತ್ತು ಪ್ರಶಸ್ತಿ ಪತ್ರ, 54 ವಿದ್ಯಾರ್ಥಿಗಳು ಬೆಳ್ಳಿಯ ಪದಕ ಮತ್ತು ಪ್ರಶಸ್ತಿ ಪತ್ರ, 27 ವಿದ್ಯಾರ್ಥಿಗಳು ಕಂಚಿನ ಪದಕ ಮತ್ತು ಪ್ರಶಸ್ತಿ ಪತ್ರಕ್ಕೆ ಭಾಜನರಾದರೆ, ಉಳಿದಂತೆ ಎಲ್ಲಾ ಪರೀಕ್ಷೆ ಬರೆದ ವಿದ್ಯಾರ್ಥಿಗಳು ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪ್ರಶಸ್ತಿ ಪತ್ರ ಪಡೆದುಕೊಂಡಿರುತ್ತಾರೆ. ಪದಕ ಮತ್ತು ಪ್ರಶಸ್ತಿ ಪತ್ರ ಗಳಿಸಿರುವ ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top