ಮುಜುಂಗಾವು: ಶ್ರೀ ಭಾರತಿ ವಿದ್ಯಾಪೀಠದಲ್ಲಿ ಪ್ರತಿಭಾ ಭಾರತಿ ಕಾರ್ಯಕ್ರಮ ಮತ್ತು ವಿದ್ಯಾರಂಗ ಕಲಾ ಸಾಹಿತ್ಯ ವೇದಿಕೆಯ ಉದ್ಘಾಟನಾ ಕಾರ್ಯಕ್ರಮವು ಸೋಮವಾರ (ಜೂ.30) ನಡೆಯಿತು.
ಅತಿಥಿಗಳಾಗಿ ಆಗಮಿಸಿದ ಪುರುಷೋತ್ತಮ ಆಚಾರ್ಯ ಮುಜುಂಗಾವು ಇವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. 'ಪ್ರತಿಭಾ ಭಾರತಿಯು ಪ್ರತಿಯೊಂದು ಮಗುವಿನ ಪ್ರತಿಭೆ ಹೊರತರುವ ವೇದಿಕೆ. ಪ್ರತಿಭಾ ಭಾರತಿಯಿಂದ ಮಕ್ಕಳ ಪ್ರತಿಭೆ ಹೆಚ್ಚಾಗುತ್ತದೆ ಹಾಗೂ ಸಭಾ ಕಂಪನ ಕಡಿಮೆಯಾಗುತ್ತದೆ' ಎಂದರಲ್ಲದೆ, ಪ್ರತಿಯೊಬ್ಬ ವಿದ್ಯಾರ್ಥಿಯೂ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಬೇಕೆಂದು ಕರೆಯಿತ್ತರು.
ವಿದ್ಯಾಲಯದ ಎಲ್ಲಾ ತರಗತಿಯ ವಿದ್ಯಾರ್ಥಿಗಳಿಂದಲೂ ಪ್ರತಿಭಾ ಪ್ರದರ್ಶನ ನಡೆಯಿತು. 10ನೇ ತರಗತಿಯ ಕು. ಅಕ್ಷರ ಬಲ್ಲಾಳ್ ಸಭಾಧ್ಯಕ್ಷ ಸ್ಥಾನ ವಹಿಸಿ ಮಾತನಾಡಿದಳು. ಶಾಲಾ ಆಡಳಿತ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಬೆಜಪ್ಪೆ, ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ್ ಭಟ್ ದರ್ಬೆಮಾರ್ಗ, ಸಂಸ್ಕೃತ ಅಧ್ಯಾಪಕ ಬಾಲಕೃಷ್ಣ ಶರ್ಮ ಅನಂತಪುರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕುಮಾರಿ ವೈಷ್ಣವಿ ಸ್ವಾಗತಿಸಿ ಕುಮಾರಿ ಪ್ರತೀಕ್ಷ ವಂದಿಸಿದಳು. ಕುಮಾರಿ ಶ್ರೀದೇವಿ ಹಾಗೂ ಕುಮಾರಿ ಲಿಖಿತ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ