ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ನೇತೃತ್ವದಲ್ಲಿ ವ್ಯಾಪಕ ಜನವಿರೋಧಿ ನೀತಿಗಳ ವಿರುದ್ಧ ಪ್ರಬಲ ಪ್ರತಿಭಟನೆ
ಮಂಗಳೂರು: ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ದಕ್ಷಿಣ ಕನ್ನಡ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಪುತ್ತೂರು ಅವರು ಮಂಗಳವಾರ ಬಿಜೆಪಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವತಿಯಿಂದ ಆಯೋಜಿಸಿದ ವಿವಿಧ ಗ್ರಾಮ ಪಂಚಾಯತ್ ಹಾಗೂ ಪಟ್ಟಣ ಪಂಚಾಯತ್ ಮತ್ತು ಪುರಸಭೆ ಕಚೇರಿಗಳ ಎದುರು ನಡೆದ ಪ್ರತಿಭಟನೆಗಳಲ್ಲಿ ಭಾಗವಹಿಸಿದರು.
ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನಿರ್ಧಾರಗಳು, ಬೆಲೆ ಏರಿಕೆ ಹಾಗೂ ನಿರ್ಲಕ್ಷ್ಯ ನೀತಿಯ ವಿರುದ್ಧ ಸ್ಥಳೀಯ ಬಿಜೆಪಿ ಘಟಕಗಳು ಸಂಘಟಿತ ಧರಣಿ ಮತ್ತು ಪ್ರತಿಭಟನೆಯನ್ನು ಆಯೋಜಿಸಿತ್ತು. ಈ ಹೋರಾಟದ ಅಂಗವಾಗಿ ಹಲವಾರು ಗ್ರಾಮ ಪಂಚಾಯತ್ ಗೆ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ನೇರವಾಗಿ ಹಾಜರಾಗಿ ಸ್ಥಳೀಯ ಜನ ಪ್ರತಿನಿಧಿಗಳು ಹಾಗೂ ಮುಖಂಡರೊಂದಿಗೆ ಪ್ರತಿಭಟನೆ ನಡೆಸಿದರು.
ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹರೇಕಳ, ಪಾವೂರು, ಕೊಣಾಜೆ, ಪಜೀರು, ಸಜೀಪ ನಡು, ಕುರ್ನಾಡು, ಬಾಳೆಪುಣಿ ಗ್ರಾಮ ಪಂಚಾಯತ್‌ಗಳು, ಕೋಟೆಕಾರ್ ಪಟ್ಟಣ ಪಂಚಾಯತ್ ಮತ್ತು ಸೋಮೇಶ್ವರ ಪುರಸಭೆ ಪ್ರತಿಭಟನೆಯಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಮಂಡಲದ ಅಧ್ಯಕ್ಷ ಜಗದೀಶ ಆಳ್ವ ಮತ್ತು ಯು.ಮೋ. ಅಧ್ಯಕ್ಷ ಮುರಲಿ ಕೊಣಾಜೆ ಹಾಗೂ ಪಂಚಾಯತ್ ಅಧ್ಯಕ್ಷರು, ಸದಸ್ಯರು ಸೇರಿದಂತೆ ಭಾರತೀಯ ಜನತಾ ಪಕ್ಷದ ಮುಖಂಡರು, ಶಕ್ತಿ ಕೇಂದ್ರ ಮತ್ತು ಬೂತ್ ಮಟ್ಟದ ನಾಯಕರ ಉಪಸ್ಥಿತಿಯಲ್ಲಿ ಪ್ರತಿಭಟನೆಗಳು ಯಶಸ್ವಿಯಾಗಿ ನಡೆದವು.
ಈ ಸಂದರ್ಭದಲ್ಲಿ ಮಾತನಾಡಿದ ಕಿಶೋರ್ ಕುಮಾರ್ ಪುತ್ತೂರು ಅವರು, “ಈ ಸರ್ಕಾರದ ಆಡಳಿತ ಸಂಪೂರ್ಣ ಜನವಿರೋಧಿ. ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್, ರಸ್ತೆ, ನೀರು, ಆಹಾರ, ವಸತಿ, ಪಡಿತರ– ಪ್ರತಿಯೊಂದು ಕ್ಷೇತ್ರದಲ್ಲೂ ಸರ್ಕಾರದ ವಿಫಲತೆಯು ಸ್ಪಷ್ಟವಾಗಿದೆ ಬೆಲೆ ಏರಿಕೆ ಮಾತ್ರ ಈ ಸರ್ಕಾರದ ಸಾಧನೆ. ಈ ಹೋರಾಟವು ಪ್ರಾರಂಭ ಮಾತ್ರ. ಮುಂದಿನ ದಿನಗಳಲ್ಲಿ ಈ ಧ್ವನಿ ಸದನದಲ್ಲೂ ಕೇಳಿಸಲಿದೆ. ಈ ಭಂಡ-ಭ್ರಷ್ಟ-ಮೂಢ ಸರ್ಕಾರವನ್ನು ಕಿತ್ತೆಸೆಯುವ ತನಕ ನಮ್ಮ ಹೋರಾಟ ನಡೆಯಲಿದೆ” ಎಂದು ತಿಳಿಸಿದರು.
ಸಮಾಜಮುಖಿ ಸ್ಪಂದನೆ:
ಕೋಟೆಕಾರ್ ನಲ್ಲಿ ಮಂಗಳಮುಖಿ ಸಮುದಾಯದ ಮೂಲಭೂತ ಸೌಕರ್ಯದ ಕೊರತೆಯ ಬಗ್ಗೆ ಸಭೆಯಲ್ಲಿ ಸ್ಪಷ್ಟ ಚರ್ಚೆ ನಡೆಯಿತು. ಶಾಸಕರು ಸ್ಥಳೀಯ ಸಂಸ್ಥೆಗಳಿಗೆ ಸಕಾಲದಲ್ಲಿ ಪೂರಕ ಸೌಕರ್ಯ ಒದಗಿಸುವ ಭರವಸೆ ನೀಡಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ